Site icon Kannada News-suddikshana

LOKASABHA ELECTION 2024: ದೇಶಾದ್ಯಂತ ʻNDAʼ 271, ʻINDIAʼ 183 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಹಣೆ ಬರಹ ನಿರ್ಧಾರವಾಗಲಿದೆ.

ದೇಶಾದ್ಯಂತ ಎನ್‌ ಡಿಎ ಮೈತ್ರಿಕೂಟದ ಅಭ್ಯರ್ಥಿಗಳು 271 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಮೈತ್ರಿ ಮೈತ್ರಿಕೂಟದ ಅಭ್ಯರ್ಥಿಗಳು 183 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 52 ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್‌ ಐದು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ರಾಜ್ಯದ 11 ಕ್ಷೇತ್ರಗಳಲಿ ಬಿಜೆಪಿ,4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಹಾಸನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಹಿನ್ನಡೆ ಸಾಧಿಸಿದ್ದಾರೆ. ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್‌ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.‌ ಮಂಜುನಾಥ್‌ ಮುನ್ನಡೆ ಸಾಧಿಸಿದ್ದಾರೆ.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಿನ್ನಡೆ ಸಾಧಿಸಿದ್ರೆ, ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಹಂತದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್‌ ಮುನ್ನಡೆ ಸಾಧಿಸಿದಾರೆ.
ದಾವಣಗೆರೆಯ ಕಾಂಗ್ರೆಸಾ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್‌ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಹಿನ್ನಡೆ ಅನುಭವಿಸಿದ್ದಾರೆ. ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಮುನ್ನಡೆ ಸಾಧಿಸಿದ್ದಾರೆ. ತುಮಕೂರಿನಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಮುನ್ನಡೆ ಸಾಧಿಸಿದ್ದಾರೆ. ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

Exit mobile version