SUDDIKSHANA KANNADA NEWS/ DAVANAGERE/ DATE:23-01-2025
ಬೆಂಗಳೂರು: ಸಿಎಂ ಸಿದ್ದರಾಮಯ್ಯರ ಖುರ್ಚಿಗೆ ಕಂಟಕ ತಂದಿರುವ ಮುಡಾ ಸೈಟ್ ಹಗರಣದ ವರದಿ ಸಲ್ಲಿಕೆಗೆ ಕ್ಷಣಗಣನೆ ಶುರುವಾಗಿದೆ. ಈ ನಡುವೆ ಲೋಕಾಯುಕ್ತವು ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್ ಚಿಟ್ ಕೊಡಲಿದೆ ಎಂದು ವರದಿ ಸೋರಿಕೆಯಾಗಿದೆ.
ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ಸಿದ್ಧಪಡಿಸಿದ್ದು, ಸಿದ್ದರಾಮಯ್ಯರಿಗೆ ಈ ವರದಿ ನೆಮ್ಮದಿ ಕೊಡಲಿದೆ ಎಂದು ಹೇಳಲಾಗುತ್ತಿದೆ.
ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಕ್ಲೈಮ್ಯಾಕ್ಸ್ ತಲುಪಿದ್ದು, ವರದಿಯಲ್ಲಿ ಮುಖ್ಯಮಂತ್ರಿ ಅವರಿಗೆ ಕ್ಲೀನ್ ಚಿಟ್ ಪಕ್ಕಾ ಎಂದು ತಿಳಿದು ಬಂದಿದೆ. ಡಿನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಪ್ರಕರಣದಲ್ಲಿ ಸಿಎಂ ಹಾಗೂ ಅವರ ಪತ್ನಿಯಾಗಲಿ ಭಾಗಿಯಾಗಿಲ್ಲ ಎಂದು ಹೇಳಲಾಗುತ್ತಿದೆ.
ಕೆಸರೆ ಜಮೀನು ಸರ್ವೇ ನಂ.464 ರ 3.16 ಎಕರೆ ಭೂಮಿ ಪರಿವರ್ತನೆಯ 14 ಸೈಟ್ ಗಳನ್ನ ಪಡೆದುಕೊಂಡ ನಿಯಮಾವಳಿಗಳ ಕುರಿತು ಎಲ್ಲಾ ಹಂತದಲ್ಲೂ ತನಿಖೆ ಮಾಡಲಾಗಿದೆ. ತನಿಖೆಯಲ್ಲಿ ಅಧಿಕಾರಿಗಳ ದೋಷಗಳು ಕಂಡು ಬಂದಿದೆ. ಸಿಎಂ ಹಾಗೂ ಅವರ ಪತ್ನಿಯಾಗಲಿ ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಹೇಳಲಾಗಿದೆ ಎನ್ನಲಾಗಿದೆ. ಲೋಕಾಯುಕ್ತರು ಅಂತಿಮ ಹಂತದ ರಿಪೋರ್ಟ್ ತಯಾರು ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.