Home ದಾವಣಗೆರೆ ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯಲೋಪ, ದುರಾಡಳಿತ ಮತ್ತು ಭ್ರಷ್ಟಾಚಾರ ಸಹಿಸುವುದಿಲ್ಲ: ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ್ ಖಡಕ್ ಎಚ್ಚರಿಕೆ
ದಾವಣಗೆರೆಕ್ರೈಂ ನ್ಯೂಸ್ಬೆಂಗಳೂರು

ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯಲೋಪ, ದುರಾಡಳಿತ ಮತ್ತು ಭ್ರಷ್ಟಾಚಾರ ಸಹಿಸುವುದಿಲ್ಲ: ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ್ ಖಡಕ್ ಎಚ್ಚರಿಕೆ

Share
ಬಿ. ಎಸ್. ಪಾಟೀಲ್
Share

ದಾವಣಗೆರೆ: ಸರ್ಕಾರಿ ಇಲಾಖೆಗಳಲ್ಲಿನ ಕರ್ತವ್ಯಲೋಪ, ನಿರ್ಲಕ್ಷ್ಯ ಹಾಗೂ ದುರಾಡಳಿ, ಲಂಚಗುಳಿತನತವನ್ನು ಲೋಕಾಯುಕ್ತ ಸಂಸ್ಥೆ ಗಂಭೀರವಾಗಿ ಪರಿಗಣಿಸಲಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ. ಎಸ್. ಪಾಟೀಲ್ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾನುವಾರ ಮತ್ತು ಸೋಮವಾರ ಜಿಲ್ಲೆಯ ವಿವಿಧ ಹಾಸ್ಟೆಲ್‍ಗಳು ಹಾಗೂ ಕಚೇರಿಗಳಲ್ಲಿ ಕಂಡುಬಂದ ಅವ್ಯವಸ್ಥೆಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಎರಡು ದಿನಗಳಲ್ಲಿ ಲೋಕಾಯುಕ್ತ ತಂಡ ಜಿಲ್ಲೆಯಾದ್ಯಂತ ಸುಮಾರು 42 ಹಾಸ್ಟೆಲ್‍ಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ನಡೆಸಿದ ಅನಿರೀಕ್ಷಿತ ತಪಾಸಣೆಯ ವರದಿಗಳನ್ನು ಸಭೆಯಲ್ಲಿ ಪ್ರಸ್ತಾಪಿಸಲಾಯಿತು.

ಹಾಸ್ಟೆಲ್‍ಗಳಲ್ಲಿ ಅವ್ಯವಸ್ಥೆ ಮತ್ತು ಅತಿಯಾದ ದಟ್ಟಣೆ: ಹೆಚ್.ಕೆ.ಆರ್ ವೃತ್ತದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‍ನ ಒಂದೇ ಹಾಲ್‍ನಲ್ಲಿ 37 ವಿದ್ಯಾರ್ಥಿನಿಯರನ್ನು ಇರಿಸಿರುವುದನ್ನು ಪ್ರಶ್ನಿಸಿದ ಅವರು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಕಟ್ಟಡಗಳನ್ನು ಬಾಡಿಗೆಗೆ ಪಡೆಯಲು ಸಮಾಜ ಕಲ್ಯಾಣ ಇಲಾಖೆಗೆ ಸೂಚಿಸಿದರು.

ಶಕ್ತಿನಗರದ ಬಾಲಕರ ಹಾಸ್ಟೆಲ್‍ನಲ್ಲಿ 16 ಮೂಟೆ ಗೋಧಿಯನ್ನು 6 ತಿಂಗಳಿನಿಂದ ಬಳಸದೆ ಹುಳು ಹಿಡಿಯುವಂತೆ ಮಾಡಿರುವ ಬಗ್ಗೆ ತನಿಖೆ ನಡೆಸಿ ಪ್ರಕರಣ ದಾಖಲಿಸಲು ಆದೇಶಿಸಿದರು.

ಅರಸಾಪುರ ಹಾಸ್ಟೆಲ್‍ನಲ್ಲಿ ಕುಡಿಯುವ ನೀರಿನ ಕೊರತೆ ಇದ್ದು ಶುದ್ದ ಕುಡಿಯುವ ನೀರನ್ನು ಕಾಯಿನ್ ಹಾಕಿ ವಿದ್ಯಾರ್ಥಿಗಳು ತರುವಂತಹ ಸ್ಥಿತಿ ನಿರ್ಮಾಣವಾಗಿದೆ. ನೀರಿನ ಸಮಸ್ಯೆ ಕಾರಣ ಮಕ್ಕಳಿಗೆ ಚರ್ಮರೋಗ ಬಂದಿದ್ದರೂ ವೈದ್ಯಕೀಯ ತಪಾಸಣೆ ನಡೆಸದಿರುವುದಕ್ಕೆ ಡಿಹೆಚ್‍ಒ ಹಾಗೂ ವೈದ್ಯಾಧಿಕಾರಿಗಳಿಗೆ ನೋಟಿಸ್ ಜಾರಿಗೆ ಸೂಚಿಸಿದರು.

ಜೆ.ಹೆಚ್. ಪಟೇಲ್ ಬಡಾವಣೆಯ ಹಾಸ್ಟೆಲ್‍ಗಳಲ್ಲಿರುವ ಮೂರು ಹಾಸ್ಟೆಲ್‍ಗಳಿಂದ 800 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಕಾಲೇಜಿಗೆ ತೆರಳಲು ಒಂದು ಬಸ್ ಮಾತ್ರ ಬರುತ್ತಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ ಎಂದು ಲೋಕಾಯುಕ್ತ ನ್ಯಾಯಮೂರ್ತಿಗಳು ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಕರಿಗೆ ಪ್ರಶ್ನಿಸಿದಾಗ ಎರಡು ಬಸ್‍ಗಳು ಸಂಚರಿಸುತ್ತಿದ್ದು ಶುಕ್ರವಾರದಿಂದ ಹೆಚ್ಚುವರಿ 1 ಬಸ್ ಸೇರಿದಂತೆ 3 ಬಸ್‍ಗಳನ್ನು ನೀಡಲಾಗಿದೆ ಎಂದಾಗ ಸಮರ್ಪಕ ಬಸ್ ಸೌಲಭ್ಯ ಒದಗಿಸಲು ಕೆಎಸ್‍ಆರ್‍ಟಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Share

Leave a comment

Leave a Reply

Your email address will not be published. Required fields are marked *