SUDDIKSHANA KANNADA NEWS/ DAVANAGERE/ DATE-09-06-2025
ದಾವಣಗೆರೆ: ದಾವಣಗೆರೆ ಘಟಕದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜೂನ್ 11 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ಹೊನ್ನಾಳಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಸಾರ್ವಜನಿಕರು ಸರ್ಕಾರದ ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ಇತ್ಯರ್ಥ ಮಾಡದ ಬಗ್ಗೆ ತಮ್ಮ ದೂರು ಹಾಗೂ ಅಹವಾಲುಗಳನ್ನು ಸಲ್ಲಿಸಬಹುದೆಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್ ಕೌಲಾಪೂರೆ ತಿಳಿಸಿದ್ದಾರೆ.