Site icon Kannada News-suddikshana

ಜುಲೈ 9ರ ನಾಳೆ ಹರಿಹರದಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

SUDDIKSHANA KANNADA NEWS/ DAVANAGERE/ DATE_08-07_2025

ದಾವಣಗೆರೆ: ದಾವಣಗೆರೆ ಘಟಕದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜುಲೈ 9 ರಂದು ಹರಿಹರ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದು ಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದು.

ಈ ಸುದ್ದಿಯನ್ನೂ ಓದಿ: ಜಿ.ಎಂ. ಸಿದ್ದೇಶ್ವರರಿಗೆ ಬಹುಪರಾಕ್: ರೇಣು ಅಂಡ್ ಟೀಂ ವಿರುದ್ಧ ವಾಗ್ಬಾಣಗಳ ಸುರಿಮಳೆ!

ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಜು.9 ರಂದು ಹರಿಹರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ, ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.

ಸಾರ್ವಜನಿಕರು ಸರ್ಕಾರದ ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ಇತ್ಯರ್ಥ ಮಾಡದ ಬಗ್ಗೆ ತಮ್ಮ ದೂರು ಹಾಗೂ ಅಹವಾಲುಗಳನ್ನು ಸಲ್ಲಿಸಬಹುದು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ, ಅಂತಹ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ.

Exit mobile version