SUDDIKSHANA KANNADA NEWS/ DAVANAGERE/ DATE:27-10-2023
ದಾವಣಗೆರೆ: ಇ-ಸ್ವತ್ತು ಮಾಡಿಕೊಡಲು 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಜಗಳೂರು ತಾಲೂಕಿನ ಕೆಚ್ಚೇನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ, ಡಾಟಾ ಆಪರೇಟರ್ ಬಿದ್ದಿದ್ದಾರೆ.
ಪಿಡಿಒ ನಂದಿಅಂಗೇಶ ಸಾರಂಗಮಠ (35), ಡಾಟಾ ಆಪರೇಟರ್ ಅಜ್ಜಯ್ಯ ಲೋಕಾಯುಕ್ತ ಬಲೆಗೆ ಬಿದ್ದವರು. ಕೆಳಗೋಟೆ ಗ್ರಾಮದ ಮನೆಗೆ ಇ-ಸ್ವತ್ತು ಮಾಡಿಕೊಡುವಂತೆ ಬಸವನಗೌಡ ಅವರು ಅರ್ಜಿ ಸಲ್ಲಿಸಿದ್ದರು. 10 ಸಾವಿರ ರೂಪಾಯಿ ನೀಡಿದರೆ ಮಾತ್ರ ಇ-ಸ್ವತ್ತು ಕೊಡುವುದಾಗಿ ನಂದಿಅಂಗೇಶ ಸಾರಂಗಮಠ ಬೇಡಿಕೆ ಇಟ್ಟಿದ್ದರು. ಈ ವಿಚಾರವನ್ನು ಲೋಕಾಯುಕ್ತ ಪೊಲೀಸರಿಗೆ ತಿಳಿಸಲಾಗಿತ್ತು.
ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ನಂದಿ ಅಂಗೇಶ ಸಾರಂಗಮಠ ಮತ್ತು ಆಪರೇಟರ್ ಅಜ್ಜಯ್ಯ ಅವರು ತಾಲೂಕು ಕಚೇರಿಯಲ್ಲಿ ಹತ್ತು ಸಾವಿರ ರೂಪಾಯಿ ಲಂಚ ಪಡೆಯುವಾಗ ರೆಡ್
ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಬಂಧಿಸಲಾಗಿದೆ.
ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪೂರೆ ಮಾರ್ಗದರ್ಶನದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಯವರು ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.