SUDDIKSHANA KANNADA NEWS/ DAVANAGERE/ DATE:05-03-2024
ಬೆಂಗಳೂರು: ಸರ್ಕಾರಿ ಉದ್ಯೋಗ ಬಯಸುತ್ತಿರುವಿರಾ…? ಆರೋಗ್ಯ ಪ್ರಚಾರ ಟ್ರಸ್ಟ್ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 18, 2024 ಅರ್ಜಿ ಸಲ್ಲಿಸಲು ಕೊನೆಯ ದಿನ.
ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 7 ಪ್ರೋಗ್ರಾಮ್ ಮ್ಯಾನೇಜರ್, ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಆನ್ಲೈನ್ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಹುದ್ದೆಯ ಮಾಹಿತಿ:
ಪ್ರೋಗ್ರಾಮ್ ಮ್ಯಾನೇಜರ್- 1
ಸೀನಿಯರ್ ಮ್ಯಾನೇಜರ್- 1
ಮ್ಯಾನೇಜರ್- 1
ಫೈನಾನ್ಸ್ & ಅಡ್ಮಿನ್ ಆಫೀಸರ್-1
ಸ್ಟೇಟ್ ಇಂಪ್ಲಿಮೆಂಟೇಶನ್ ಲೀಡ್-3
ವಿದ್ಯಾರ್ಹತೆ:
ಪ್ರೋಗ್ರಾಮ್ ಮ್ಯಾನೇಜರ್- ಸ್ನಾತಕೋತ್ತರ ಪದವಿ
ಸೀನಿಯರ್ ಮ್ಯಾನೇಜರ್- ಸ್ನಾತಕೋತ್ತರ ಪದವಿ
ಮ್ಯಾನೇಜರ್- ಪದವಿ, ಸ್ನಾತಕೋತ್ತರ ಪದವಿ
ಫೈನಾನ್ಸ್ & ಅಡ್ಮಿನ್ ಆಫೀಸರ್- ಪದವಿ, ಸ್ನಾತಕೋತ್ತರ ಪದವಿ
ಸ್ಟೇಟ್ ಇಂಪ್ಲಿಮೆಂಟೇಶನ್ ಲೀಡ್- ಸ್ನಾತಕೋತ್ತರ ಪದವಿ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವೇತನ: ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ: ಕರ್ನಾಟಕ, ಅಸ್ಸಾಂ, ಬಿಹಾರ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಸಂದರ್ಶನ ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು.