SUDDIKSHANA KANNADA NEWS/DAVANAGERE/DATE:08_12_2025
ದಾವಣಗೆರೆ: ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಭಾನುವಳ್ಳಿಯ ಎಂ. ಹೈದರಲಿ ಇವರು ರಾಜ್ಯಶಾಸ್ತ್ರ ವಿಷಯದಲ್ಲಿ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯವು ಪಿಹೆಚ್.ಡಿ. ಪ್ರದಾನ ಮಾಡಿದೆ.
ಹೈದರಲಿ ರಾಜ್ಯಶಾಸ್ತ್ರ ರಾಜಕೀಯ ವಿಷಯದಲ್ಲಿ ‘ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅಲ್ಪಸಂಖ್ಯಾತರ ಭಾಗವಹಿಸುವಿಕೆ (ವಿಶೇಷವಾಗಿ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದಂತೆ) ಎಂಬ ವಿಷಯದ ಮೇಲೆ ಸಂಶೋಧನೆ ನಡೆಸಿ ಸ್ನಾತಕೋತ್ತರ ರಾಜ್ಯಶಾಸ್ತ್ರ ವಿಭಾಗಕ್ಕೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿ.ಹೆಚ್.ಡಿ. ದೊರೆತಿದೆ.
ದಾವಣಗೆರೆ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಷಯದ ಪ್ರಾಧ್ಯಾಪಕರು, ಅಧ್ಯಕ್ಷರು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ಅಶೋಕಕುಮಾರ್ ವೀ. ಪಾಳೇದ ಇವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಮಂಡಿಸಿದ್ದರು.





Leave a comment