ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

M. P. Renukacharya: ಕಾಂಗ್ರೆಸ್ ಪಕ್ಷ ಸೇರಲ್ಲ, ಅವ್ರೇನೂ ಕರೆದಿಲ್ಲ: ನಾನೇನೂ ಹೋಗ್ತೀನಿ ಎಂದಿಲ್ಲ ಎಂದ ಎಂ. ಪಿ. ರೇಣುಕಾಚಾರ್ಯ

On: August 26, 2023 9:45 AM
Follow Us:
M. P. Renukacharya Clarification
---Advertisement---

SUDDIKSHANA KANNADA NEWS/ DAVANAGERE/ DATE:26-08-2023

ದಾವಣಗೆರೆ: ಬಿಜೆಪಿ ಮಾಜಿ ಶಾಸಕ, ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ (M. P. Renukacharya) ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರಾ ಎಂಬ ವದಂತಿಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: 

Davanagere Big Update: ಅಮೆರಿಕಾದಲ್ಲಿ ಸಾವು ಕಂಡ ಮೂವರ ಮೃತದೇಹಗಳು ದಾವಣಗೆರೆಗೆ ಬರಲ್ಲ: ಮಧ್ಯರಾತ್ರಿ 12ಕ್ಕೆ ಅಮೆರಿಕಾದ ಕ್ಯಾಟೊನ್ಸ್ವಿಲ್ಲೆನಲ್ಲಿ ಅಂತ್ಯಸಂಸ್ಕಾರ.. ಯಾಕೆ ಬರಲಿಲ್ಲ ಗೊತ್ತಾ…?

 

ಹೊನ್ನಾಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವುದಿಲ್ಲ, ನನ್ನನ್ನು ಅವರು ಕರೆದೂ ಇಲ್ಲಾ, ನಾನು ಹೋಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ ಎಂದು ಎಂ. ಪಿ. ರೇಣುಕಾಚಾರ್ಯ (M. P. Renukacharya)  ಹೇಳಿದರು.

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕನ್ನು ಬರಪಟ್ಟಿಗೆ ಸೇರಿಸುವಂತೆ ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡಿದ್ದೇನೆ. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ಅದೇ ರೀತಿಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಭೇಟಿ ಮಾಡಿದ್ದೇನೆ. ಈ ನಾಯಕರ ಭೇಟಿ ಉದ್ದೇಶ ಹೊನ್ನಾಳಿ – ನ್ಯಾಮತಿ ಅವಳಿ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡುವಂತೆ ಒತ್ತಾಯಿಸಲು. ಈ ವಿಚಾರ ಬಿಟ್ಟು ಬೇರೆ ವಿಚಾರ ಮಾತನಾಡಿಲ್ಲ. ನಾನು ಕಾಂಗ್ರೆಸ್ ಸೇರಲ್ಲ, ಈ ಬಗ್ಗೆ ಆಸಕ್ತಿಯೂ ಇಲ್ಲ ಎಂದು ಎಂ. ಪಿ. ರೇಣುಕಾಚಾರ್ಯ (M. P. Renukacharya) ತಿಳಿಸಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್, ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಕೃಷ್ಣ ಭೈರೇಗೌಡರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ, ಮಾಜಿ ಶಾಸಕನಾಗಿ ನನ್ನ ಕರ್ತವ್ಯವನ್ನು ಮಾಡಿದ್ದೇನೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವುದಿಲ್ಲ ಎಂದರು.

ಮುಂಬರುವ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿಯ ಪ್ರಬಲ ಆಕ್ಷಾಂಕ್ಷಿ ಎಂದು‌ ನಾನು ಹೇಳಿದ್ದೇನೆ. ನನಗೆ ಲೋಕಸಭೆಗೆ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸ ಇದೆ. ಹಲವು ವರ್ಷಗಳಿಂದ ಬಿಜೆಪಿಯಲ್ಲಿ ದುಡಿದಿದ್ದೇನೆ. ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಿದ ಅನುಭವವಿದೆ. ವಿಶ್ವ ಮೆಚ್ಚಿದ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರ 9 ವರ್ಷಗಳ ಕ್ರಾಂತಿಕಾರಕ ಅಭಿವೃದ್ಧಿ ಕಾರ್ಯಗಳು ಎಲ್ಲರ ಮೆಚ್ಚುಗೆಗೆ ವ್ಯಕ್ತವಾಗಿದೆ. ಬೇರೆಯವರಿಗೆ ಬಿಜೆಪಿ ಟಿಕೆಟ್ ಕೊಟ್ಟರೂ ಗೆಲುವಿಗೆ ಶ್ರಮಿಸುತ್ತೇನೆ ಎಂದು ಎಂ. ಪಿ. ರೇಣುಕಾಚಾರ್ಯ (M. P. Renukacharya) ಹೇಳಿದರು.

ದಾವಣಗೆರೆ ಲೋಕಸಭಾ ಕ್ಷೇತ್ರವು ಬಿಜೆಪಿ ಭದ್ರಕೋಟೆ. ಜಿ. ಎಂ. ಸಿದ್ದೇಶ್ವರ ಅವರು ಈಗಾಗಲೇ ನಾಲ್ಕು ಬಾರಿ ಗೆದ್ದಿದ್ದಾರೆ. ನನಗೂ ಅವಕಾಶ ನೀಡುವಂತೆ ಮನವಿ ಮಾಡುತ್ತೇನೆ. ಹಾಗೆಂದ ಮಾತ್ರಕ್ಕೆ ನನಗೆ ಟಿಕೆಟ್ ಕೊಡಬೇಕು ಎಂಬುದಲ್ಲ. ನಾನೂ ಸಹ ಟಿಕೆಟ್ ಆಕಾಂಕ್ಷಿ ಎಂದು ರೇಣುಕಾಚಾರ್ಯ (M. P. Renukacharya) ತಿಳಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment