SUDDIKSHANA KANNADA NEWS/ DAVANAGERE/ DATE:04-03-2025
ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತಂತೆ ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪ ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದೊಂದು ದಿನ ಸಿಎಂ ಆಗುವ ಅರ್ಹತೆ ಡಿ. ಕೆ. ಶಿವಕುಮಾರ್ ಗೆ ಇದೆ ಎಂದು ಹೇಳಿದ್ದೇನೆ ಎಂದರು.
ಕಾರ್ಕಳದಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿತ್ತು. ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ. ಕೆ. ಶಿವಕುಮಾರ್ ಬಂದಿದ್ದರು. ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸಾಕಷ್ಟು ಗೊಂದಲ ಬರುತ್ತಿದೆ. ಡಿ. ಕೆ. ಶಿವಕುಮಾರ್ ಅವರನ್ನು ಸಿಎಂ ಆಗಿ ಮಾಡುವುದು ಬಿಡುವ ವಿಚಾರ ಕುರಿತಂತೆ ಗೊಂದಲ ಉಂಟು ಮಾಡುವುದು ಬೇಡ. ಪಕ್ಷಕ್ಕೂ ಡ್ಯಾಮೇಜ್ ಆಗುತ್ತದೆ. ಒಳ್ಳೆಯ ಕೆಲಸ ಮಾಡಿದ್ದಾರೆ. ಒಳ್ಳೆಯ ಮುಖಂಡರಾಗುತ್ತಿದ್ದಾರೆ. ಚುನಾವಣೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು, ಇವತ್ತಲ್ಲ ನಾಳೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದೆ ಎಂದು ಸ್ಪಷ್ಟನೆ ನೀಡಿದರು.
ಸಿಎಂ ಸಿದ್ದರಾಮಯ್ಯರನ್ನು ಮುಖ್ಯಮಂಂತ್ರಿ ಸ್ಥಾನದಿಂದ ಕೆಳಗಿಳಿಸಿ ಡಿ. ಕೆ. ಶಿವಕುಮಾರ್ ಅವರನ್ನು ಕೂರಿಸಿ ಎಂದರ್ಥದಲ್ಲಿ ಹೇಳಿಲ್ಲ. ಮುಂದೊಂದು ದಿನ ಸಿಎಂ ಆಗ್ತೀರಾ ಎಂದಿದ್ದೆ. ಸಿದ್ದರಾಮಯ್ಯರನ್ನು ತೆಗೆದು ಡಿಕೆ ಶಿವಕುಮಾರ್ ಅವರನ್ನು ಮಾಡಿ ಎಂದು ಹೇಳಿಲ್ಲ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.