SUDDIKSHANA KANNADA NEWS/ DAVANAGERE/ DATE:13-03-2024
ನವದೆಹಲಿ: ಲಂಚ ಪ್ರಕರಣ ಸಂಬಂಧ ಚನ್ನಗಿರಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸುಪ್ರೀಂಕೋರ್ಟ್ ಈ ಪ್ರಕರಣ ಸಂಬಂಧ ಮಾಡಾಳ್ ವಿರೂಪಾಕ್ಷಪ್ಪರಿಗೆ ನೊಟೀಸ್
ಜಾರಿ ಮಾಡಿದೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ ರಾಸಾಯಿನಿಕ ತೈಲ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ಲೋಕಾಯುಕ್ತ ಸಂಸ್ಥೆಯು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಪುರಸ್ಕರಿಸಿರುವ ಸುಪ್ರೀಂಕೋರ್ಟ್ ಕೆ. ಮಾಡಾಳ್ ವಿರೂಪಾಕ್ಷಪ್ಪರಿಗೆ ನೊಟೀಸ್ ಜಾರಿ ಮಾಡಿದೆ.
ನ್ಯಾಯಮೂರ್ತಿಗಳಾ ಅನಿರುದ್ಧ ಬೋಸ್ ಮತ್ತು ಸಂಜಯ್ ಕುಮಾರ್ ಅವರ ನೇತೃತ್ವದ ಪೀಠವು ಮಾಡಾಳ್ ವಿರೂಪಾಕ್ಷಪ್ಪ ಅವರಿಂ ಪ್ರತಿಕ್ರಿಯೆ ಕೇಳಿದೆ. ಲೋಕಾಯುಕ್ತ ಪರವಾಗಿ ಹಿರಿಯ ವಕೀಲರಾದ ಬಸವಪ್ರಭು
ಪಾಟೀಲ ಹಾಗೂ ಮಾಡಾಳ್ ವಿರೂಪಾಕ್ಷಪ್ಪರ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಸಿದ್ಧಾರ್ಥ್ ಲೂತ್ರಾ ವಾದ ಮಂಡನೆ ಮಾಡಿದರು.