ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲಿಗೆ…!

On: April 1, 2023 1:04 PM
Follow Us:
---Advertisement---

SUDDIKSHANA KANNADA NEWS| DAVANAGERE

DATE:01-04-2023

 

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲಿಗೆ….!

ದಾವಣಗೆರೆ: ಚನ್ನಗಿರಿ (CHANNAGIRI)  ಶಾಸಕ ಮಾಡಾಳ್ ವಿರೂಪಾಕ್ಷಪ್ಪ (MADAL VIRUPAKSHAPPA) ಜೈಲಿಗೆ ಹೋಗಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಪ್ರಿಲ್ 11ರವೆರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಏ. 6ರಂದು ಮಾಡಾಳ್ ವಿರೂಪಾಕ್ಷಪ್ಪ (MADAL VIRUPAKSHAPPA) ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಈ ಮಧ್ಯೆ ಆಕ್ಷೇಪಣೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯವು ಸೂಚಿಸಿದೆ.

ಕಳೆದ ಕೆಲ ದಿನಗಳ ಹಿಂದೆ ತುಮಕೂರಿನ ಕ್ಯಾತ್ಸಂದ್ರ ಟೋಲ್ ಗೇಟ್ ಬಳಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ವಶಕ್ಕೆ ಪಡೆದು ಬಂಧಿಸಿ ವಿಚಾರಣೆ ನಡೆಸಲಾಗಿತ್ತು.

ವಿಚಾರಣೆ ವೇಳೆ ಲೋಕಾಯುಕ್ತ ಪೊಲೀಸರ ಪ್ರಶ್ನೆಗೆ ಸರಿಯಾದ ಉತ್ತರ ನೀಡದೇ ತನಿಖೆಗೆ ಅಸಹಕಾರ ನೀಡಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರು ಜೈಲು ಸೇರಿದ್ದಾರೆ. ಈ ಮೂಲಕ ಬಿಜೆಪಿ ಶಾಸಕರೊಬ್ಬರು ಲಂಚ ಪ್ರಕರಣದಲ್ಲಿ ಕಾರಾಗೃಹದಲ್ಲಿ‌ ಮುದ್ದೆ ಮುರಿಯಬೇಕಿದೆ.

ಬೆಂಗಳೂರಿನಲ್ಲಿ ಸಾಬೂನು ಮತ್ತಯ ಮಾರ್ಜಕ ಮಂಡಳಿಯ ಅಧ್ಯಕ್ಷರಾಗಿದ್ದ ವೇಳೆ ಮಾಡಾಳ್ ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಮಾಡಾಳ್ ಕಚೇರಿಯಲ್ಲಿ 40 ಲಕ್ಷ ರೂಪಾಯಿ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಮನೆ ಹಾಗೂ ಕಚೇರಿ ಸೇರಿದಂತೆ ಬರೋಬ್ಬರಿ 9 ಕೋಟಿ ರೂಪಾಯಿ ಅಧಿಕ ಕಂತೆ ಕಂತೆ ಹಣ ಪತ್ತೆಯಾಗಿತ್ತು. ಭ್ರಷ್ಟಾಚಾರ, ಲಂಚ ಆರೋಪದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣ ರಾಜ್ಯ ಮಾತ್ರವಲ್ಲ, ದೇಶಾದ್ಯಂತ ಸದ್ದು ಮಾಡಿತ್ತು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment