Home ದಾವಣಗೆರೆ ದೀಪಾವಳಿ ಹಬ್ಬದಲ್ಲಿ ಪಟಾಕಿ ಅಪಾಯಗಳ ಕುರಿತು ಜಾಗೃತಿ: ಶಾಲೆಗಳಲ್ಲಿ ವಿಶೇಷ ಅಭಿಯಾನಕ್ಕೆ ಮಧು ಬಂಗಾರಪ್ಪ ಆದೇಶ
ದಾವಣಗೆರೆನವದೆಹಲಿಬೆಂಗಳೂರು

ದೀಪಾವಳಿ ಹಬ್ಬದಲ್ಲಿ ಪಟಾಕಿ ಅಪಾಯಗಳ ಕುರಿತು ಜಾಗೃತಿ: ಶಾಲೆಗಳಲ್ಲಿ ವಿಶೇಷ ಅಭಿಯಾನಕ್ಕೆ ಮಧು ಬಂಗಾರಪ್ಪ ಆದೇಶ

Share
ಮಧು ಬಂಗಾರಪ್ಪ
Share

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಪಟಾಕಿ ಸಿಡಿಸುವುದರಿಂದ ಮಕ್ಕಳ ಭದ್ರತೆ ಹಾಗೂ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಯಲು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಪಟಾಕಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಸಂಬಂಧ ಅಧಿಕೃತ ಸುತ್ತೋಲೆ ಹೊರಡಿಸಲಾಗಿದ್ದು, ಶಾಲೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಪಟಾಕಿಗಳ ಬಳಕೆಯಿಂದ ಸಂಭವಿಸಬಹುದಾದ ಅಪಘಾತಗಳ ತಡೆಗಟ್ಟುವಿಕೆ, ಸುರಕ್ಷಿತ ಹಾಗೂ ಪರಿಸರ ಸ್ನೇಹಿ ದೀಪಾವಳಿ ಆಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗುತ್ತದೆ. ಅಲ್ಲದೆ, ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತ ದೀಪಾವಳಿ ಆಚರಣೆಯ ಬಗ್ಗೆ ಪ್ರತಿಜ್ಞೆ ಕೈಗೊಳ್ಳುವಂತೆ ಮತ್ತು ಪಟಾಕಿಯಿಂದ ಪರಿಸರದ ಮೇಲೆ ಉಂಟಾಗುವ ಹಾನಿಯ ಕುರಿತು ಅರಿವು ಮೂಡಿಸುವಂತೆ ನಿರ್ದೇಶಿಸಲಾಗಿದೆ.

ಶಾಲೆಗಳಲ್ಲಿ ಜಾಗೃತಿ ಅಭಿಯಾನ: ರಾಜ್ಯದ ಎಲ್ಲಾ ಶಾಲೆಗಳು ಮತ್ತು ಪಿಯು ಕಾಲೇಜುಗಳಲ್ಲಿ ಪಟಾಕಿ ಸುಡುವಾಗ ಎಚ್ಚರ ವಹಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿಶೇಷ ಜಾಗೃತಿ ಮೂಡಿಸಲಾಗುತ್ತದೆ.

ಸುರಕ್ಷಿತ ದೀಪಾವಳಿ ಪ್ರತಿಜ್ಞೆ: ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸುರಕ್ಷಿತ ಹಾಗೂ ಪರಿಸರ ಸ್ನೇಹಿ ದೀಪಾವಳಿ ಆಚರಿಸುವ ಬಗ್ಗೆ ಪ್ರತಿಜ್ಞೆ ಕೈಗೊಳ್ಳಲಿದ್ದಾರೆ.

ಪೋಷಕರ ಬೆಂಬಲಕ್ಕೆ ಮನವಿ: ಮಕ್ಕಳ ಭವಿಷ್ಯ ಹಾಗೂ ಆರೋಗ್ಯ ಕಾಪಾಡುವ ಈ ಸತ್ಕಾರ್ಯಕ್ಕೆ ಪೋಷಕರು ಸಂಪೂರ್ಣ ಬೆಂಬಲ ನೀಡಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿನಂತಿಸಿದ್ದಾರೆ.

ಎಲ್ಲರೂ ಸುರಕ್ಷಿತವಾಗಿ ಹಾಗೂ ಸಂಭ್ರಮದಿಂದ ಬೆಳಕಿನ ಹಬ್ಬವನ್ನು ಆಚರಿಸಿಕೊಳ್ಳಬೇಕು ಎಂಬುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ನಾಡಿನ ಸಮಸ್ತ ಜನತೆಗೆ ಸಚಿವರು ದೀಪಾವಳಿ ಹಬ್ಬದ ಹಾರ್ಮಿಕ ಶುಭಾಶಯಗಳನ್ನು ಕೋರಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles