ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

‘ಮಧುರ ಚೆನ್ನ’ ರಾಜ್ಯಪ್ರಶಸ್ತಿ ಕಸಾಪ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪಗೆ ಪ್ರದಾನ

On: June 25, 2025 6:18 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-25-06-2025

ಬೆಂಗಳೂರು: ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಥಮ ರಾಜ್ಯ ಕನ್ನಡ ಜಾನಪದ ಸಮ್ಮೇಳನದಲ್ಲಿ ರಾಜ್ಯ ಕನ್ನಡ ಜಾನಪದ ಪರಿಷತ್ ಕೊಡಮಾಡುವ ಮಧುರ ಚೆನ್ನ ರಾಜ್ಯ ಪ್ರಶಸ್ತಿಯನ್ನು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ. ವಾಮದೇವಪ್ಪ ಅವರಿಗೆ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಬಿ ವಾಮದೇವಪ್ಪನವರು ಕನ್ನಡ ನಾಡು-ನುಡಿ, ಸಾಹಿತ್ಯ, ಜಾನಪದ ಕಲೆಗಳ ಸಂರಕ್ಷಣೆ ಮತ್ತು ಸಂವರ್ಧನೆಗಾಗಿ ಶ್ರಮಿಸುತ್ತಿರುವುದನ್ನು ಗುರುತಿಸಿ ರಾಜ್ಯ ಕನ್ನಡ ಜಾನಪದ ಪರಿಷತ್ತು ಈ ಪ್ರಶಸ್ತಿಯನ್ನು ನೀಡಿ ಅವರನ್ನು
ಸನ್ಮಾನಿಸಿ ಗೌರವಿಸಲಾಗಿದೆ.

ಸಮ್ಮೇಳನದಲ್ಲಿ ಮಧುರ ಚೆನ್ನ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭದ ದಿವ್ಯ ಸಾನಿಧ್ಯವನ್ನು ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು, ಅಥಣಿ ಶ್ರೀ ಮೊಟಗಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಹಾಗೂ ಬೆಂಗಳೂರಿನ ವಿಜಯನಗರ ಆದಿಚುಂಚನಗಿರಿ ಶಾಖಾಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ ವಹಿಸಿದ್ದರು.

ರಾಜ್ಯ ಪ್ರಥಮ ಕನ್ನಡ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಸಿ ಸೋಮಶೇಖರ ಭಾ ಆ ಸೇ (ನಿ), ಖ್ಯಾತ ಜಾನಪದ ಗಾಯಕ ಗುರುರಾಜ ಹೊಸಕೋಟೆ, ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್ ಬಾಲಾಜಿ, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ನರಸಿಂಹಮೂರ್ತಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೊ. ಕೆ ಎಸ್ ಕೌಜಲಗಿ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್, ಜಾನಪದ ತಜ್ಞ ಡಾ. ಶಂಭು ಬಳೆಗಾರ, ನ್ಯಾಮತಿಯ ಕುರುವ ಬಸವರಾಜ್, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿ ಶ್ರೀನಿವಾಸಮೂರ್ತಿ ಹಾಗೂ ದಾವಣಗೆರೆ ಜಿಲ್ಲಾ ಕಸಾಪ ಪದಾಧಿಕಾರಿಗಳು ಮತ್ತು ಕಸಾಪ ಆಜೀವ ಸದಸ್ಯ ಜೀವನ್ ಜೆ ಸಿ ಕೂಲಂಬಿ ಭಾಗವಹಿಸಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment