ಮುಂಬೈ: ಮಹಾರಾಷ್ಟ್ರದ ಧುಳೆ ಜಿಲ್ಲೆಯ ತಾಪಿ ನದಿಯಲ್ಲಿ ಕೆಲವು ತಿಂಗಳ ಹಿಂದೆಯಷ್ಟೇ ಪ್ರೇಮ ವಿವಾಹವಾಗಿದ್ದ ನವದಂಪತಿಯ ಶವಗಳು ನಿಗೂಢ ರೀತಿಯಲ್ಲಿ ಪತ್ತೆಯಾಗಿವೆ. ಮೃತರ ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ ಬೀಗ ಜಡಿಯಲಾಗಿದ್ದು, ಈ ಘಟನೆ ಇಡೀ ಪ್ರದೇಶದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಧುಳೆ ಜಿಲ್ಲೆಯ ಸಾವಲ್ಡೆ ಪ್ರದೇಶದ ನದಿ ತಳದಲ್ಲಿ ಈ ಮೃತದೇಹಗಳು ಪತ್ತೆಯಾಗಿವೆ. ಮೃತರನ್ನು ಜಲಗಾಂವ್ ಜಿಲ್ಲೆಯ ಅಮಲ್ನೇರ್ ತಾಲೂಕಿನ ಶ್ಯಾಮ್ ಹರಿ ಪಾಟೀಲ್ ಹಾಗೂ ಸಪ್ನಾ ಪಾಟೀಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಪರಸ್ಪರ ಪ್ರೀತಿಸಿ ಕೆಲ ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು.
ಮಹಾರಾಷ್ಟ್ರದ ಧುಳೆ ಜಿಲ್ಲೆಯ ಸಾವಲ್ಡೆ ಬಳಿಯ ತಾಪಿ ನದಿಯಲ್ಲಿ ಈ ಘಟನೆ ನಡೆದಿದ್ದು, ಜಲಗಾಂವ್ ಜಿಲ್ಲೆಯ ಅಮಲ್ನೇರ್ ತಾಲೂಕಿನ ಮೂಲದ ಶ್ಯಾಮ್ ಹರಿ ಪಾಟೀಲ್ ಮತ್ತು ಸಪ್ನಾ ಪಾಟೀಲ್ ಎಂದು ಗುರುತಿಸಲಾಗಿದೆ. ಇಬ್ಬರ ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನದಿ ತಳದಲ್ಲಿದ್ದವು.
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಗಳು, “ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ಪ್ರತಿಯೊಂದು ಕೋನದಿಂದಲೂ ಸಮಗ್ರ ತನಿಖೆ ನಡೆಸುತ್ತಿದ್ದೇವೆ,” ಎಂದು ತಿಳಿಸಿದ್ದಾರೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.





Leave a comment