Site icon Kannada News-suddikshana

ನಟಿ ಮಲೈಕಾ ಅರೋರಾ ತಂದೆ 7 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈನ ಬಾಂದ್ರಾದಲ್ಲಿರುವ ಕಟ್ಟಡವೊಂದರ ಏಳನೇ ಮಹಡಿಯಿಂದ ಅವರು ಜಿಗಿದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಲೈಕಾ ಅವರ ತಂದೆ ಭಾರತದ ಗಡಿ ಪಟ್ಟಣವಾದ ಫಾಜಿಲ್ಕಾದ ಪಂಜಾಬಿ ಹಿಂದೂ ಆಗಿದ್ದು, ಅವರು ಭಾರತೀಯ ಮರ್ಚೆಂಟ್ ನೇವಿಯಲ್ಲಿ ಕೆಲಸ ಮಾಡುತ್ತಿದ್ದರು.ಇನ್ನು ಆತ್ಮಹತ್ಯೆ ಬಗ್ಗೆ ವಿಚಾರಣೆ ನಡೆಯುತ್ತಿದ್ದು , ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

 

Exit mobile version