SUDDIKSHANA KANNADA NEWS/ DAVANAGERE/ DATE:25-01-2025
ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು, ಶ್ರೀ ತರಳಬಾಳು ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ಆಲೂರು ಗ್ರಾಮಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಮರುಳಸಿದ್ದೇಶ್ವರ ನಿಲಯದ ಗೃಹ ಪ್ರವೇಶವನ್ನು ಸಚಿವರು ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀಗಳು ಸಾನಿಧ್ಯವನ್ನು ವಹಿಸಿದ್ದರು.
ಈ ವೇಳೆ ಎಸ್. ಎಸ್. ಮಲ್ಲಿಕಾರ್ಜುನ್ ಹಾಗೂ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸಿರಿಗೆರೆ ಶ್ರೀಗಳಿಂದ ಆಶೀರ್ವಾದ ಪಡೆದರು. ಕೆ. ಎಸ್ ಚನ್ನಬಸಪ್ಪ, ತ್ರಿವೇಣಿ ಚನ್ನಬಸಪ್ಪ, ಗ್ರಾಮದ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.