ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (TMC) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ದಕ್ಷಿಣ 24-ಪರಗಣ ಜಿಲ್ಲೆಯ ಸೋನಾರ್ಪುರದಲ್ಲಿ ಪ್ರತಿಭಟನಾಕಾರರು ತೀವ್ರ ದಾಳಿ ನಡೆಸಿದ್ದಾರೆ. ಚುನಾವಣಾ ನಂತರದ ಹಿಂಸಾಚಾರಕ್ಕೆ ಬಲಿಯಾದ ಸಂತ್ರಸ್ತರ ಕುಟುಂಬಗಳನ್ನು ಭೇಟಿಯಾಗಲು ಅವರು ಅಲ್ಲಿಗೆ ತೆರಳಿದ್ದಾಗ ಈ ಘಟನೆ ನಡೆದಿದೆ.
ಸ್ಥಳೀಯರು ಅಭಿಷೇಕ್ ಬ್ಯಾನರ್ಜಿ ಅವರಿಗೆ ಮುತ್ತಿಗೆ ಹಾಕಿ, ಕಲ್ಲು, ಶೂ ಮತ್ತು ಮೊಟ್ಟೆಗಳನ್ನು ತೂರಿದ್ದಾರೆ. ಅಲ್ಲದೆ ‘ಕಳ್ಳ, ಕಳ್ಳ’ ಎಂದು ಘೋಷಣೆ ಕೂಗುತ್ತಾ ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಸದ್ಯ ಗಾಯಗೊಂಡಿರುವ ಅಭಿಷೇಕ್ ಬ್ಯಾನರ್ಜಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಮಮತಾ ಬ್ಯಾನರ್ಜಿ, “ಆಡಳಿತಗಾರರೇ ಕೊಲೆಗಡುಕರಾಗಿದ್ದಾರೆ – ಬಿಜೆಪಿಗೆ ಧಿಕ್ಕಾರ” ಎಂದು ಎಕ್ಸ್ (ಟ್ವಿಟರ್) ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ದಾಳಿಯ ಹಿಂದೆ ಬಿಜೆಪಿ ಕೈವಾಡವಿದ್ದು, ರಾಜಕೀಯ ಪಿತೂರಿಯಿಂದಲೇ ಈ ಕೃತ್ಯ ಎಸಗಲಾಗಿದೆ ಎಂದು ಟಿಎಂಸಿ ನಾಯಕರು ಆರೋಪಿಸಿದ್ದಾರೆ.





Leave a comment