ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಂಗಳೂರು : ಮಾದಕ ವಸ್ತು ಎಂಡಿಎಂಎ ಸಾಗಿಸುತ್ತಿದ್ದ ನಾಲ್ವರು ಅರೆಸ್ಟ್- 14.85 ಲಕ್ಷ ಮೌಲ್ಯದ ಸೊತ್ತು ವಶಕ್ಕೆ

On: May 16, 2024 9:12 AM
Follow Us:
---Advertisement---

ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 270 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಗಳು ಬಂಡ್ಸಾಲೆ ಹೌಸ್, ಅಡ್ಡೂರು ಗ್ರಾಮದ ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ಬಾವಾ ಮಹಲ್, ಜೆ.ಎಂ.ಕ್ರಾಸ್ ರಸ್ತೆ,ಬಂದರಿನ ಮೊಹಮ್ಮದ್ ನೌಮಾನ್(22), ಬೋಳಿಯಾರ್ ಪೋಸ್ಟ್ ಮತ್ತು ಗ್ರಾಮ, ಉಳ್ಳಾಲ ತಾಲೂಕಿನ ಮೊಹಮ್ಮದ್ ಸಫೀಲ್(23), ಎಂದು ಗುರುತಿಸಲಾಗಿದೆ.

ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಕಾರಿನಲ್ಲಿ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ದೇರಳಕಟ್ಟೆಯ ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಸಾಗಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದ ಆರೋಪಿಳನ್ನು ವಶಕ್ಕೆ ಪಡೆಯಲಾಯಿತು.

ಆರೋಪಿಗಳ ವಶದಲ್ಲಿದ್ದ 6,50,000- ರೂ. ಮೌಲ್ಯದ 270 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 4 ಮೊಬೈಲ್ ಫೋನ್ ಗಳು, ಟೊಯೊಟಾ ಕೊರೊಲ್ಲಾ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 14,85,500 ಅಂದಾಜಿಸಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳು ಅಕ್ರಮ ಲಾಭಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಎಂಡಿಎಂಎ ನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ. ಆರೋಪಿಗಳ ಪೈಕಿ ಮೊಹಮ್ಮದ್ ಅಮೀನ್ ರಾಫಿ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು 2021 ನೇ ಇಸವಿಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Join WhatsApp

Join Now

Join Telegram

Join Now

Leave a Comment