Site icon Kannada News-suddikshana

ಮಂಗಳೂರು: ಸಹ್ಯಾದ್ರಿ ಕಾಲೇಜು ಸಮೀಪ ಹೊತ್ತಿ ಉರಿದ BMW ಕಾರು..!

ಮಂಗಳೂರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯು ಕಾರಿನಲ್ಲಿ ಇದ್ದಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಸಮೀಪ ಇಂದು ನಡೆದಿದೆ.

ಇಂದು ಮಧ್ಯಾಹ್ನದ ವೇಳೆಗೆ ಈ ಅವಘಡ ಸಂಭವಿಸಿದ್ದು, ಕಾರಿನಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಕಾರು ಚಾಲಕ ಕಾರನ್ನು ನಿಲ್ಲಿಸಿದ್ದು ಕೂಡಲೇ ಕಾರಿನಲ್ಲಿದ್ದವರು ಹೊರ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಸುಟ್ಟು ಕರಕಲಾದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬೆಂಕಿ ಅವಘಡಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ.

Exit mobile version