ಮಂಗಳೂರು : ಮನಪಾ ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ತಕ್ಷಣ ಜಾರಿಗೆ ಬರುವಂತೆ ಆದೇಶಿಸಿದೆ.
ಈವರೆಗೆ ಮಂಗಳೂರು ಮನಪಾ ಆಯುಕ್ತರಾಗಿದ್ದ ಸಿ.ಎಲ್.ಆನಂದ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ. ಅವರಿಂದ ತೆರವಾಗಿರುವ ಸ್ಥಾನಕ್ಕೆ ಶಿವಮೊಗ್ಗ ಜಿಲ್ಲೆಯ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ, ಹಿರಿಯ ಕೆಎಎಸ್ ಅಧಿಕಾರಿ ರವಿಚಂದ್ರ ನಾಯಕ್ರನ್ನು ನೇಮಕ ಮಾಡಿದೆ.