Site icon Kannada News-suddikshana

Mangalore:ಲೋಕಾಯುಕ್ತ ಅಧಿಕಾರಿಗಳ ದಾಳಿ: 20 ಸಾವಿರ ರೂಪಾಯಿ ಪಡೆಯುವಾಗ ಲೋಕಾ ಬಲೆಗೆ

SUDDIKSHANA KANNADA NEWS/ DAVANAGERE/ DATE:18-10-2023

ಮಂಗಳೂರು(Mangalore): 20 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.

Read Also This Story:

Siddaramaiah Congrats: ಏಷ್ಯನ್ ಗೇಮ್ಸ್ ನಲ್ಲಿ ಪದಕ ವೀರರಿಗೆ ಅಭಿನಂದನೆ: ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಸಕಾರಾತ್ಮಕ ಸ್ಪಂದನೆಗೆ ಸಿಎಂ ಭರವಸೆ

ಗುಣಮಟ್ಟ ಭರವಸೆ ವಿಭಾಗದ ಸಹಾಯಕ ಇಂಜಿನಿಯರ್ ರೊನಾಲ್ಡ್ ಲೋಬೋ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಸಹಾಯಕ ಇಂಜಿನಿಯರ್ ರೊನಾಲ್ಡ್ ಲೋಬೋ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಕೆಲಸ ಮಾಡಿದ ಬಿಲ್ ಪಾಸ್ ಮಾಡುವುದಕ್ಕೆ ಹಣದ ಬೇಡಿಕೆ ಇಟ್ಟಿದ್ದರು. ರಸ್ತೆ ಕಾಮಗಾರಿ ನಡೆಸಿದ್ದು, ಈ ಬಿಲ್ ಪಾಸ್ ಮಾಡಬೇಕಾದರೆ ಹಣ ನೀಡುವಂತೆ ಪೀಡಿಸುತ್ತಿದ್ದರು. 20 ಸಾವಿರ ರೂಪಾಯಿ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿ ಬಿದ್ದಿದ್ದು, ವಿಚಾರಣೆ ಮುಂದುವರಿದಿದೆ. ಲೋಕಾಯುಕ್ತ ಎಸ್ ಪಿ ಸೈಮನ್ ಹಾಗು ಡಿ ವೈ ಎಸ್ ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಿ, ತನಿಖೆ ಮುಂದುವರಿಸಲಾಗಿದೆ.

Exit mobile version