Site icon Kannada News-suddikshana

ಇಂದು ಮಂಗಳೂರಿಗೆ ಮುಖ್ಯಮಂತ್ರಿ ಸಹಿತ ಹಲವು ಗಣ್ಯರು ಆಗಮನ

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 25 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಮಂಗಳೂರು ಅಂತರಾಷ್ಟ್ರೀಯ ಮಧ್ಯಾಹ್ನ 12.10ಕ್ಕೆ ಮಂಗಳೂರಿಗೆ ಆಗಮಿಸುವವರು. ಆ ಬಳಿಕ ರಸ್ತೆ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವವರು. ಆನಂತ ಬೆಳ್ತಂಗಡಿಯಲ್ಲಿ ನಡೆಯಲಿರುವ ಮಾಜಿ ಶಾಸಕ ದಿ. ವಸಂತ ಬಂಗೇರಾ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಅಲ್ಲಿಂದ ಮಂಗಳೂರಿಗೆ ಆಗಮಿಸಿ ರಾತ್ರಿ 7 ಕ್ಕೆ ಟಿಎಂಪೈ ಸಭಾಂಗಣದಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಿಎಂ ಜತೆ ಡಿಸಿಎಂ ಹಾಗೂ ಹಲವು ಸಚಿವರು ಕೂಡಾ ಭಾಗವಹಿಸಲಿದ್ದಾರೆ. ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸುವ ಸಾಧ್ಯತೆ ಇದೆ.

ಹಲವಾರು ಪ್ರಮುಖ ಗಣ್ಯರು ಮಂಗಳೂರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರ ಪ್ರದೇಶದಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ವಾಹನದಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

Exit mobile version