ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು 16ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಕೂಡ (ಜು.16) ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ರಾಜ್ಯದಲ್ಲಿ ಪ್ರವಾಹದ ಬಗ್ಗೆ ಎಚ್ಚರಿಕೆ ಕೊಟ್ಟಿದೆ. ರಾಜ್ಯದ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಕೆಲವು ಜಿಲ್ಲೆಗಳಲ್ಲಿ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಹಾರಂಗಿ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ್ದು, ಪ್ರವಾಹದ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.