ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಂಗಳೂರು: ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ– ಮೂವರು ಅರೆಸ್ಟ್

On: August 22, 2024 4:41 PM
Follow Us:
---Advertisement---

ಮಂಗಳೂರು: ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಅಪಹರಿಸಿ, ಅರೆನಗ್ನಗೊಳಿಸಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ಬುಧವಾರ ಬಂಧಿಸಿದ್ದಾರೆ. ದಿಯಾನ್, ಅಫ್ಘಾನ್, ಸಲ್ಮಾನ್ ಬಂಧಿತ ಆರೋಪಿಗಳು.

ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ.14ರಂದು ನೆಹರೂ ಮೈದಾನದಲ್ಲಿ ನಡೆದ ಫುಟ್ಬಾಲ್ ಪಂದ್ಯಾಟದ ಸಂದರ್ಭ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದೇ ಕೋಪದಲ್ಲಿ ಆ.19ರಂದು ಸಂಜೆ ಪಾಂಡೇಶ್ವರದಲ್ಲಿ ನಿಂತಿದ್ದ ಅಪ್ರಾಪ್ತ ವಯಸ್ಸಿನ ಮೂವರು ವಿದ್ಯಾರ್ಥಿಗಳನ್ನು ತಂಡವೊಂದು ಕಾರಿನಲ್ಲಿ ಅಪಹರಿಸಿ ಅರೆಬೆತ್ತಲೆಗೊಳಿಸಿ ಅಮಾನುಷ ವಾಗಿ ಹಲ್ಲೆ ನಡೆಸಿ, ಕೈಮುಗಿದು ಕ್ಷಮೆ ಕೇಳುವಂತೆ ಒತ್ತಾಯಿಸಿದೆ.

ಅಲ್ಲದೆ ದುಷ್ಕರ್ಮಿಗಳು ತಾವು ಹಲ್ಲೆ ನಡೆಸಿರುವ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಪ್ರಕರಣ ಬಯಲಾಗುತ್ತಿದ್ದಂತೆ ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಅದರಂತೆ ವಿದ್ಯಾರ್ಥಿಗಳಾದ ದಿಯಾನ್, ಅಫ್ಘಾನ್, ಸಲ್ಮಾನ್‌ರನ್ನು ಬಂಧಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿರುವ ಇಬ್ಬರು ಅಪ್ರಾಪ್ತರ ಸಹಿತ ಇನ್ನೂ ಕೆಲವರು ಭಾಗಿಯಾಗಿದ್ದಾರೆ. ಅವರನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment