ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಭೀಕರ ರಸ್ತೆ ಅಪಘಾತ; ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ!

On: September 7, 2024 5:30 PM
Follow Us:
---Advertisement---

ಮಂಗಳೂರು: ಮದುವೆಯಾದ 2ನೇ ದಿನಗಳಲ್ಲಿ ಭೀಕರ ರಸ್ತೆ ಅಪಘಾತದಲ್ಲಿ (Road Accident) ನವವಿವಾಹಿತೆ (Newly Married Women) ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ.

ಭೀಕರ ಕಾರು ಅಪಘಾತದಲ್ಲಿ ನವ ವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಮೃತ ನವವಿವಾಹಿತೆ. ಗಂಭೀರವಾಗಿ ಗಾಯಗೊಂಡಿರುವ ಅನಿಶ್ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನವದಂಪತಿ ಬಿ.ಸಿ ರಸ್ತೆ ಕಡೆಯಿಂದ ಮಂಗಳೂರು (Mangaluru) ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು, ಡಿವೈಡರ್‌ನಿಂದಾಚೆಗೆ ಹಾರಿ, ಎದುರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿವಿಸಿದ ಬಳಿಕ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ಅನಿಶ್ ಕೃಷ್ಣ – ಮಾನಸ ದಂಪತಿ ಕಳೆದ ಎರಡು ದಿನಗಳ ಹಿಂದಷ್ಟೇ ಅಂದ್ರೆ ಸೆಪ್ಟಂಬರ್‌ 5ರಂದು ದೇಂತಡ್ಕ ದೇವಸ್ಥಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ಕಾರ್ಯಕ್ರಮದ ವಿಚಾರವಾಗಿ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದರು. ವಾಪಸ್‌ ಮನೆಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ.

Join WhatsApp

Join Now

Join Telegram

Join Now

Leave a Comment