Site icon Kannada News-suddikshana

ಮೇ 27ರಿಂದ ನಲಿ-ಕಲಿ ಆರಂಭ: ಪಠ್ಯಪುಸ್ತಕ, ಸಮವಸ್ತ್ರ ಪೂರೈಕೆ

ಡುಪಿ: ಮೇ 27ರಿಂದ ನಲಿ ಕಲಿ ಕಾರ್ಯಕ್ರಮ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶಾಲೆಗಳ ಆರಂಭಕ್ಕೆ ಸಿದ್ಧತೆಗಳು ನಡೆದಿವೆ. ಪಠ್ಯಪುಸ್ತಕ, ಸಮವಸ್ತ್ರ ಪೂರೈಕೆಯಾಗಲಿದ್ದು, ಇದೇ 27ರಿಂದ ನಲಿಕಲಿ ಕಾರ್ಯಕ್ರಮ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ಕೆಪಿಎಸ್ ಶಾಲೆಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಮುಂದಿನ ವರ್ಷ 500 ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುವುದು. ಮುಂದಿನ ಮೂರು ವರ್ಷಗಳಲ್ಲಿ ಮೂರು ಸಾವಿರ ಸರ್ಕಾರಿ ಶಾಲೆಗಳನ್ನು ತೆರೆಯಲಾಗುವುದು. ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಗ್ರೇಸ್ ಮಾರ್ಕ್ಸ್ ಪದ್ಧತಿ ಮುಂದಿನ ವರ್ಷಗಳಲ್ಲಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆ ಅವಧಿ ಕಡಿತಗೊಳಿಸಿ ಶಾಲೆ ಆರಂಭಿಸಿರುವ ಕ್ರಮಕ್ಕೆ ಶಿಕ್ಷಣ ಇಲಾಖೆ ಆಕ್ಷೇಪಿಸಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲೆಗಳನ್ನು ನಿಗದಿಯಂತೆಯೇ ಮೇ 29 ರಿಂದ ಆರಂಭಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಏಪ್ರಿಲ್ 11ರಿಂದ ಮೇ 28ರ ವರೆಗೆ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಬೇಸಿಗೆ ರಜೆ ಘೋಷಿಸಿತ್ತು.

Exit mobile version