ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಕ್ಕಳು, ಗರ್ಭಿಣಿಯರಿಗೆ ಅವಧಿ ಮೀರಿದ ತೊಗರಿ ಬೇಳೆ, ಹೆಸರುಕಾಳು, ಆಹಾರದ ಪೊಟ್ಟಣಗಳು: ಕೈ ಶಾಸಕ ಕೆಂಡಾಮಂಡಲ!

On: February 26, 2025 6:27 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:26-02-2025

ದಾವಣಗೆರೆ: ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡುತ್ತಿರುವುದನ್ನು ಕಂಡು ಶಾಸಕ ಕೆ. ಎಸ್. ಬಸವಂತಪ್ಪ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ತರಾಟೆಗೆ ತೆಗೆದುಕೊಂಡರು.

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಚನ್ನಗಿರಿ ತಾಲೂಕಿನ ಅಶೋಕನಗರ ಕ್ಯಾಂಪ್ ಅಂಗನವಾಡಿ ಕೇಂದ್ರಕ್ಕೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಕೆ.ಎಸ್.ಬಸವಂತಪ್ಪ, ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಟಿಕ ಆಹಾರದ ಹೆಸರಿನಲ್ಲಿ ಏಜೆನ್ಸಿಯವರು ಬಳಕೆಗೆ ಯೋಗ್ಯವಲ್ಲದ ಆಹಾರ ಪದಾರ್ಥಗಳನ್ನು ಪೂರೈಸಿದ್ದು, ಇಲ್ಲಿನ ಅವಧಿ ಮೀರಿದ ಆಹಾರದ ಪದಾರ್ಥಗಳೇ ಸಾಕ್ಷಿಯಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಏಕೆ ತಂದಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆಯರನ್ನು ಪ್ರಶ್ನಿಸಿದರು.

ಗ್ರಾಮೀಣ ಪ್ರದೇಶದ ಅಂಗನವಾಡಿಗೆ ಪೂರೈಕೆಯಾಗಿರುವ ತೊಗರಿ ಬೇಳೆ, ಹೆಸರು ಕಾಳು ಮತ್ತು ಮಿಶ್ರಿತ ಪೌಷ್ಟಿಕ ಆಹಾರದ ಪೊಟ್ಟಣಗಳ ಮೇಲೆ ಅವಧಿ ಮೀರಿದ ದಿನಾಂಕ ನಮೂದಾಗಿದ್ದು, ಆ ಪೊಟ್ಟಣಗಳಲ್ಲಿರುವ ಆಹಾರವನ್ನು ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಕೊಡುತ್ತಿದ್ದು, ಇದರಿಂದ ಮಕ್ಕಳು ಮತ್ತು ಗರ್ಭಿಣಿಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದರೆ ಯಾರು ಹೊಣೆ ಎಂದು ಕಿಡಿಕಾರಿದರು.

ಗುತ್ತಿಗೆ ಪಡೆದ ಏಜೆನ್ಸಿಗಳು ಗುಣಮಟ್ಟದ ಆಹಾರ ಪೊಟ್ಟಣಗಳನ್ನು ಪೂರೈಸುತ್ತಿವೆಯೋ ಅಥವಾ ಇಲ್ಲವೋ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಆಗಾಗ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲನೆ ನಡೆಸಬೇಕು. ಆದರೆ ಅವರು ಕೂಡ ನಮಗೂ ಅಂಗನವಾಡಿ ಕೇಂದ್ರಗಳಿಗೂ ಸಂಬಂಧವಿಲ್ಲ ಎಂಬಂತೆ ನಿರ್ಲಕ್ಷ್ಯ ಮಾಡುವುದರಿಂದಲೇ ದಾಸ್ತಾನು ಇದ್ದ ಆಹಾರ ಪದಾರ್ಥಗಳನ್ನೇ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ವಿತರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗರ್ಭಿಣಿಯರಿಗೆ ಪ್ರತಿನಿತ್ಯ ಮೊಟ್ಟೆ ವಿತರಿಸಬೇಕು. ಆದರೆ ಅಂಗನವಾಡಿ ಕಾರ್ಯಕರ್ತೆಯರ ಖಾತೆಗೆ ಹಣ ಹಾಕಿಲ್ಲ ಎಂದು ಒಂದು ತಿಂಗಳಿನಿಂದ ಮೊಟ್ಟೆ ಕೊಟ್ಟಿಲ್ಲ. ಈ ಬಗ್ಗೆ ಗ್ರಾಮಸ್ಥರಿಂದ ದೂರು ಬಂದಿತ್ತು, ಇದು ಆಗಬಾರದು. ಅಂಗನವಾಡಿ ಕಾರ್ಯಕರ್ತೆಯರು ಅಧಿಕಾರಿಗಳ ಗಮನಕ್ಕೆ ತರಬೇಕು. ಇಲ್ಲದಿದ್ದರೆ ನಮ್ಮ ಗಮನಕ್ಕೆ ತಂದರೆ ಈ ಬಗ್ಗೆ ಕ್ರಮ ತೆಗೆದುಕೊಳ್ಳಬಹುದು. ಇನ್ಮುಂದೆ ಇಂತಹ ಘಟನೆಗಳು ನಡೆದರೆ ಕೂಡಲೇ ನಮ್ಮ ಗಮನಕ್ಕೆ ತರಬೇಕೆಂದು ಸೂಚನೆ ನೀಡಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment