Home ನವದೆಹಲಿ ಶಾಸಕ ಕೆ.ಎಸ್. ಬಸವಂತಪ್ಪಗೆ ಸಚಿವ ಸ್ಥಾನ ಕೊಡಿಸಲು ಸಿದ್ದರಾಮಯ್ಯರ ಮೇಲೆ ಒತ್ತಡ ಹೇರಿದ ಹೆಚ್. ಆಂಜನೇಯ!
ನವದೆಹಲಿದಾವಣಗೆರೆಬೆಂಗಳೂರು

ಶಾಸಕ ಕೆ.ಎಸ್. ಬಸವಂತಪ್ಪಗೆ ಸಚಿವ ಸ್ಥಾನ ಕೊಡಿಸಲು ಸಿದ್ದರಾಮಯ್ಯರ ಮೇಲೆ ಒತ್ತಡ ಹೇರಿದ ಹೆಚ್. ಆಂಜನೇಯ!

Share
ಕೆ.ಎಸ್. ಬಸವಂತಪ್ಪ
Share

ದಾವಣಗೆರೆ: ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕ್ಷೇತ್ರದ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತಿರುವ ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.

ಮಾಯಕೊಂಡ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಅವಧಿಯಿಂದಲೇ ಜನಪರ ಕೆಲಸಗಳ ಮೂಲಕ ಗುರುತಿಸಿಕೊಂಡಿರುವ ಬಸವಂತಪ್ಪ ಅವರು, ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋಲು ಕಂಡಿದ್ದರೂ ನಿರುತ್ಸಾಹಗೊಳ್ಳದೆ ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕ ಕಾಯ್ದುಕೊಂಡು ಅವರ ಸಮಸ್ಯೆಗಳಿಗೆ ಸ್ಪಂದಿಸಿದರು. ಇದರ ಫಲವಾಗಿ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿ ಕ್ಷೇತ್ರದ ಅಭಿವೃದ್ಧಿಗೆ ಹಗಲು-ಇರುಳು ಶ್ರಮಿಸುತ್ತಿದ್ದಾರೆ.

ಕ್ಷೇತ್ರದಲ್ಲಿ ಯಾರೇ ಮೃತಪಟ್ಟಿದ್ದರೂ ಸುದ್ದಿ ತಿಳಿದ ಕೂಡಲೇ ಅಲ್ಲಿಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುವುದರ ಜೊತೆಗೆ ಅಗತ್ಯ ನೆರವು ನೀಡುವ ಮೂಲಕ ಜನರ ಕಷ್ಟ-ಸುಖಗಳಲ್ಲಿ ಭಾಗಿಯಾಗುತ್ತಾರೆ. ಈ ಕಾರಣದಿಂದಲೇ ಅವರು ಕ್ಷೇತ್ರದಲ್ಲಿ ‘ಅಂಬ್ಯುಲೆನ್ಸ್ ಬಸವಂತಪ್ಪ’ ಎಂಬ ಹೆಸರಿನಿಂದ ಜನಪ್ರಿಯರಾಗಿದ್ದಾರೆ.

ಪ್ರತಿದಿನ ಹತ್ತಾರು ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಸ್ಥಳದಲ್ಲಿಯೇ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕೆಲಸವನ್ನು ಶಾಸಕ ಕೆ.ಎಸ್.ಬಸವಂತಪ್ಪ ಅವರು ಮಾಡುತ್ತಿದ್ದಾರೆ. ಹೀಗಾಗಿ ಎರಡನೇ ಅವಧಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರಾದ ಅಣಜಿ ನಾಗರಾಜ್, ಮಂಜುನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಚಂದ್ರಶೇಖರ್, ರಾಮಗೊಂಡನಹಳ್ಳಿ ಶರಣಪ್ಪ, ಗುಮ್ಮನೂರು ಶಂಭುಲಿಂಗಪ್ಪ, ಆಲೂರು ಸೋಮಣ್ಣ, ಆನಗೋಡು ಕರಿಬಸಪ್ಪ, ಬಾಡ ರುದ್ರಸ್ವಾಮಿ, ಪಕ್ಷದ ಮುಖಂಡರು, ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಎಚ್.ಆಂಜನೇಯ ಹೈಕಮಾಂಡ್ ಮೇಲೆ ಒತ್ತಡ:

ಇನ್ನೊಂದೆಡೆ, ಮಾಜಿ ಸಚಿವ ಎಚ್.ಆಂಜನೇಯ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ, ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.

ಇಂದಿರಾ ಗಾಂಧಿಯವರ ಕಾಲದಿಂದಲೂ ಮಾದಿಗ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ನಿರಂತರವಾಗಿ ನಂಬಿಕೊಂಡು, ಬೆಂಬಲಿಸುತ್ತಾ ಬಂದಿದೆ. ಈ ಸಮುದಾಯವು ಪಕ್ಷದ ಭದ್ರವಾದ ಮತಬ್ಯಾಂಕ್ ಆಗಿದೆ. ಆದ್ದರಿಂದ ಪಕ್ಷದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ನಮ್ಮ ಸಮುದಾಯಕ್ಕೆ ಹೆಚ್ಚಿನ ಸ್ಥಾನಮಾನ ನೀಡಬೇಕು. ಇದರಿಂದ ಮುಂಬರುವ ದಿನಗಳಲ್ಲಿ ಪಕ್ಷಕ್ಕೂ ಮತ್ತಷ್ಟು ಬಲ ಬರಲಿದೆ ಎಂದು ಇದೇ ಸಂದರ್ಭದಲ್ಲಿ ಪಕ್ಷದ ನಾಯಕರಿಗೆ ಮನವಿ ಮಾಡಿಕೊಟ್ಟರು.

ಈಗಾಗಲೇ ಎಡ ಸಮುದಾಯದ ಕೋಟಾದಡಿ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಇನ್ನು ಸಮುದಾಯದ ಇಬ್ಬರಿಗೆ ಸಚಿವ ಸ್ಥಾನ ನೀಡಬೇಕು. ಅದರಲ್ಲಿ ಕೆ.ಎಸ್.ಬಸವಂತಪ್ಪ ಅವರಿಗೆ ಅವಕಾಶ ಕಲ್ಪಿಸಬೇಕು ಎಂದು ಮಾಜಿ ಸಚಿವ ಎಚ್. ಆಂಜನೇಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹಾಕಿದ್ದಾರೆ.

Share

Leave a comment

Leave a Reply

Your email address will not be published. Required fields are marked *