Home ದಾವಣಗೆರೆ ‘ಋತುಚಕ್ರ’ ರಜೆ ಪಡೆಯಲು ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸಬೇಕಿಲ್ಲ: ಮಹಿಳೆಯರಿಗೆ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ
ದಾವಣಗೆರೆನವದೆಹಲಿಬೆಂಗಳೂರು

‘ಋತುಚಕ್ರ’ ರಜೆ ಪಡೆಯಲು ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸಬೇಕಿಲ್ಲ: ಮಹಿಳೆಯರಿಗೆ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ

Share
Share

ದಾವಣಗೆರೆ: ಎಲ್ಲ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯವನ್ನು ಉದ್ಯೋಗದಾತರು ನೀಡಬೇಕು.

ಕಾರ್ಖಾನೆಗಳ ಕಾಯ್ದೆ, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ತೋಟ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ, ಮತ್ತು ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆಯಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ಕಾರ್ಮಿಕರುಗಳಿಗೆ ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಉದ್ಯೋಗದಾತರು ಒದಗಿಸುವಂತೆ ಸರ್ಕಾರವು ಆದೇಶಿಸಿದೆ.

ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಿಸಿಕೊಳ್ಳುವುದು ಮತ್ತು ‘ಋತುಚಕ್ರ’ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣಪತ್ರ ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂದು ಕಲಬುರ್ಗಿ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತರು ಡಾ|| ವೆಂಕಟೇಶ್ ಅ. ಶಿಂದಿಹಟ್ಟಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *