SUDDIKSHANA KANNADA NEWS/DAVANAGERE/DATE:16_10_2025
ದಾವಣಗೆರೆ: ನಗರದಲ್ಲಿ ಸಂಚರಿಸುವ ಯಾರೊಬ್ಬರೂ ಮೀಟರ್ ಮತ್ತು ಡಿಸ್ಪ್ಲೇ ಬೋರ್ಡ್ ಅಳವಡಿಸದೇ ಹಾಗೂ ನಿಗಧಿತ ದರಕ್ಕಿಂತ ಹೆಚ್ಚಿನ ದರ ಪಡೆದು ಪ್ರಯಾಣಿಕರ ಸುಲಿಗೆ ಮಾಡಲಾಗುತ್ತಿದೆ.
READ ALSO THIS STORY: ದಾವಣಗೆರೆಯ ಬ್ಲಾಕ್ ಸ್ಪಾಟ್ ಗುಂಡಿಗಳ ಮುಚ್ಚಿ: ಜಿಲ್ಲಾಡಳಿತ ಖಡಕ್ ವಾರ್ನಿಂಗ್ ಕೊಡಲು ಕಾರಣ ಏನು?
ಆದ್ದರಿಂದ ಎಲ್ಲಾ ಆಟೋ ರಿಕ್ಷಾ ಚಾಲಕರು ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಮತ್ತು ಡಿಸ್ಪ್ಲೇ ಬೋರ್ಡ್ ಅಳವಡಿಸಬೇಕು. ತಪ್ಪಿದಲ್ಲಿ ಸಂಬಂಧಿಸಿದವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಆಟೋ ಚಾಲಕ ಸಂಘದ ಅಧ್ಯಕ್ಷರಿಗೆ ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ಅವರು ಖಡಕ್ ಸೂಚನೆ ನೀಡಿದ್ದಾರೆ.
ಹೂವಿನ ಗೂಡಂಗಡಿ ಸ್ಥಳಾಂತರ:
ನಗರದ ಪಿ.ಬಿ ರಸ್ತೆಯಲ್ಲಿನ ಪಾದಚಾರಿ ಮಾರ್ಗದಲ್ಲಿಯೇ ಹೂವಿನ ಗೂಡಂಗಡಿಗಳಿವೆ. ಇದೇ ಮಾರ್ಗದಲ್ಲಿ ರೈಲ್ವೆ ನಿಲ್ದಾಣ, ಹರಿಹರ ನಗರಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಾರೆ. ಗೂಡಂಗಡಿಗಳು ಪಾದಚಾರಿ ಮಾರ್ಗದಲ್ಲಿಯೇ ಇರುವುದರಿಂದ ಅನೇಕ ಅಪಘಾತಗಳು ಸಂಭವಿಸಿವೆ. ಸಾರ್ವಜನಿಕರಿಗೆ, ವಾಹನ ಸವಾರರಿಗೆ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಆದ್ದರಿಂದ ಬೇರೆಡೆಗೆ ಸ್ಥಳಾಂತರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಡಿಹೆಚ್ಓ ಡಾ. ಷಣ್ಮುಖಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್, ಡಿವೈಎಸ್ಪಿ ಶರಣ ಬಸವೇಶ್ವರ, ಲೋಕೋಪಯೋಗಿ ಇಲಾಖೆ ತಾಂತ್ರಿಕ ಸಹಾಯಕ ಮಲ್ಲೇಶಪ್ಪ, ಕೆಎಸ್ಆರ್ಟಿಸಿ ಮಾರ್ಗ ನಿಯಂತ್ರಣಾಧಿಕಾರಿ ಫಕ್ರುದ್ದೀನ್ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.