Home ಕ್ರೈಂ ನ್ಯೂಸ್ ಶಂಕರ್ ಬಿದರಿ ಅಪ್ಪಟ ಸುಳ್ಳುಗಾರ, ಕೂಡಲೇ ವೀರಶೈವ ಮಹಾಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಚಿವ ಎಂ.ಬಿ. ಪಾಟೀಲ್ ಆಕ್ರೋಶ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಶಂಕರ್ ಬಿದರಿ ಅಪ್ಪಟ ಸುಳ್ಳುಗಾರ, ಕೂಡಲೇ ವೀರಶೈವ ಮಹಾಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಚಿವ ಎಂ.ಬಿ. ಪಾಟೀಲ್ ಆಕ್ರೋಶ!

Share
ಎಂ.ಬಿ. ಪಾಟೀಲ್
Share

ಬೆಂಗಳೂರು: ವಿಶ್ವಗುರು ಬಸವಣ್ಣನನ್ನು ಹೀಯಾಳಿಸಿರುವ ವ್ಯಕ್ತಿ ಜತೆ ಕೈಜೋಡಿಸಿರುವ ವೀರಶೈವ ಮಹಾಸಭೆಯ ರಾಜ್ಯಾಧ್ಯಕ್ಷ ಸ್ಥಾನದಲ್ಲಿರುವ ಶಂಕರ್  ಬಿದರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮರ್ಯಾದೆ ಉಳಿಸಿಕೊಳ್ಳುವ ಕನಿಷ್ಠ ಸೌಜನ್ಯವನ್ನೂ ಹೊಂದಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ತೀವ್ರವಾಗಿ ಕಿಡಿಕಾರಿದ್ದಾರೆ.

ಬಿದರಿ ಅವರ ಹೇಳಿಕೆಗಳಿಗೆ ಆಕ್ರೋಶ ವ್ಯಕ್ತಪಡಿಸಿರುವ ಸಚಿವರು, 3-4 ಪಕ್ಷಗಳನ್ನು ಬದಲಾಯಿಸಿ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡಿರುವ ಹೀನ ಮನಸ್ಸಿನ ವ್ಯಕ್ತಿಯಿಂದ ಸಮಾಜಕ್ಕೆ ಯಾವುದೇ ಉಪದೇಶದ ಅವಶ್ಯಕತೆಯಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ನಮ್ಮ ಪೂರ್ವಜರು ಸಿರಸಂಗಿ ಲಿಂಗರಾಜರು ತಮ್ಮ ಸಮಸ್ತ ಆಸ್ತಿಯನ್ನು ಲಿಂಗರಾಜ ಫಂಡ್ ಮೂಲಕ ಶಿಕ್ಷಣಕ್ಕೆ ದಾನ ಮಾಡಿದ್ದು, ಅದೇ ಫಂಡ್ ಮೂಲಕ ಶಿಕ್ಷಣ ಪಡೆದ ಬಿದರಿಯವರ ಎಲ್ಲಾ ಇತಿಹಾಸಗಳು ನಮಗೆ ತಿಳಿದಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ವಚನಪಿತಾಮಹ ಫ.ಗು. ಹಳಕಟ್ಟಿಯವರ ಕುರಿತು ತಾನು ಮಾಡಿರುವ ಕಾರ್ಯಗಳನ್ನು ಇಡೀ ನಾಡೇ ಗಮನಿಸುತ್ತಿದೆ ಎಂದಿರುವ ಸಚಿವರು, ವೀರಪ್ಪನ್ ವಿರುದ್ಧದ ಕಾರ್ಯಾಚರಣೆ ವೇಳೆ ಬಿದರಿ ಮಾಡಿರುವ ಅನಾಚಾರಗಳು, ಅನೈತಿಕ ಅವಾಂತರಗಳು ಮತ್ತು ಅಕ್ರಮಗಳನ್ನು ಮುಂಬರುವ ದಿನಗಳಲ್ಲಿ ಜನರ ಮುಂದಿಡುವುದಾಗಿ ಎಚ್ಚರಿಸಿದ್ದಾರೆ.

ವೀರಶೈವ ಮಹಾಸಭೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಗ್ರಹ: ಬಸವಣ್ಣನನ್ನು ಹೀಯಾಳಿಸಿದವರ ಜತೆ ಕೈಜೋಡಿಸಿರುವ ಬಿದರಿ ಅವರು ಕೂಡಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ಮರ್ಯಾದೆ ಉಳಿಸಿಕೊಳ್ಳಬೇಕು ಎಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹಿಸಿದ್ದಾರೆ.

ವೀರಪ್ಪನ್ ಕಾರ್ಯಾಚರಣೆ ಅಕ್ರಮಗಳ ಬಗ್ಗೆ ಎಚ್ಚರಿಕೆ: ತಾನು ಸತ್ಯವಂತ ಎಂದು ಬೆನ್ನು ತಟ್ಟಿಕೊಳ್ಳುವ ಬಿದರಿ ಅವರ ವಿರುದ್ಧ ವೀರಪ್ಪನ್ ಕಾರ್ಯಾಚರಣೆ ಕಾಲದ ಅಕ್ರಮಗಳು ಹಾಗೂ ಸಿದ್ದಗಂಗಾ ಹಿರಿಯ ಶ್ರೀಗಳ ವಿಷಯದಲ್ಲಿ ನಡೆದ ಷಡ್ಯಂತ್ರದ ಸತ್ಯವನ್ನು ಶೀಘ್ರದಲ್ಲೇ ಬಹಿರಂಗಪಡಿಸುವುದಾಗಿ ತಿಳಿಸಿದ್ದಾರೆ.

ಕಟ್ಟುಕಥೆಗಳ ಖಂಡನೆ: ಸಿದ್ದಗಂಗಾ ಹಿರಿಯ ಶ್ರೀಗಳನ್ನು ಭೇಟಿ ಮಾಡಿಸುವಂತೆ ತಾನು ಬಿದರಿ ಆಫೀಸಿಗೆ ಹೋಗಿದ್ದೆ ಎಂಬ ಹೇಳಿಕೆ ಹಸಿಸುಳ್ಳು ಮತ್ತು ಅಪ್ಪಟ ಕಟ್ಟುಕಥೆಯಾಗಿದ್ದು, ತಾನು ಯಾರ ಮುಂದೆಯೂ ಸ್ವಾಭಿಮಾನ ಬಿಟ್ಟುಕೊಟ್ಟವನಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಮ್ಮ ಆತ್ಮಗೌರವವನ್ನು ಬದಿಗಿಟ್ಟು ಯಾರ ಮನೆಯ ಬಾಗಿಲಿಗೂ ಹೋಗಿ ತಲೆತಗ್ಗಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

Share