SUDDIKSHANA KANNADA NEWS/ DAVANAGERE/ DATE:02-03-2024
ದಾವಣಗೆರೆ: ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ , ದೊಡ್ಡಬಾತಿ ಮತ್ತು ಹಳೇಬಾತಿ ಗ್ರಾಮ ಪಂಚಾಯತಿಗಳ ವತಿಯಿಂದ ಮಾ.3 ರಂದು ಮಧ್ಯಾಹ್ನ 3 ಗಂಟೆಗೆ ದೊಡ್ಡಬಾತಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.
ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ಉದ್ಘಾಟಿಸುವರು.
ದೊಡ್ಡಬಾತಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ. ಡಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ಡಾ. ಜಿ. ಎಂ. ಸಿದ್ದೇಶ್ವರ , ಹಳೆಬಾತಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೀತಾ ಆರ್, ದೊಡ್ಡಬಾತಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಭಾನುವಳ್ಳಿ ಸಿದ್ದಪ್ಪ, ಹಳೇಬಾತಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪುಷ್ಪ ಎ, ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ತಾಲ್ಲೂಕು
ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ, ಪಂ.ರಾ.ಇಂ. ಉಪವಿಭಾಗದ ಸಹಾಯಕ ಕಾರ್ಯಾಪಾಲಕ ಇಂಜಿನಿಯರ್ ಬಿ. ಪುಟ್ಟಸ್ವಾಮಿ, ದೊಡ್ಡಬಾತಿ ಮತ್ತು ಹಳೇಬಾತಿ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು ಭಾಗವಹಿಸುವರು.