ಬೆಂಗಳೂರು: ರಾಜ್ಯ ಸರ್ಕಾರದ 2025-26ನೇ ಸಾಲಿನ ಬಜೆಟ್ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಶೈಕ್ಷಣಿಕ ಪ್ರಗತಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಮುಖ್ಯವಾಗಿ ವಸತಿ ಶಾಲೆಗಳ ಸಂಖ್ಯೆ ಹೆಚ್ಚಳ, ಲ್ಯಾಪ್ಟಾಪ್ ವಿತರಣೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಮೂಲಕ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಮಹತ್ವದ ಯೋಜನೆಗಳನ್ನು ಪ್ರಕಟಿಸಿದೆ.
ವಕ್ಫ್ ಆಸ್ತಿಗಳ ಸಮಗ್ರ ಅಭಿವೃದ್ಧಿ, 100 ಮೌಲಾನಾ ಮಾದರಿ ಶಾಲೆಗಳ ಉನ್ನತೀಕರಣಕ್ಕೆ ಸಿಎಂ ಸಿದ್ದರಾಮಯ್ಯರು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಮುಖ್ಯಾಂಶಗಳು:
ಶಿಕ್ಷಣ ಕ್ರಾಂತಿ: 100 ಮೌಲಾನಾ ಮಾದರಿ ಮತ್ತು ಉರ್ದು ಶಾಲೆಗಳನ್ನು 400 ಕೋಟಿ ರೂ. ವೆಚ್ಚದಲ್ಲಿ ಕೆ.ಪಿ.ಎಸ್ (KPS) ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು.
ವಸತಿ ಶಾಲೆಗಳ ವಿಸ್ತರಣೆ: 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು ಹಾಗೂ 35 ಹೊಸ ಸಂತ ಶಿಶುನಾಳ ಶರೀಫ ವಸತಿ ಶಾಲೆಗಳ ಸ್ಥಾಪನೆ.
ವೃತ್ತಿಪರ ತರಬೇತಿ: ಅಲ್ಪಸಂಖ್ಯಾತರ ವಸತಿ ಶಾಲೆಗಳನ್ನು K-CET/JEE/NEET ಪರೀಕ್ಷೆಗಳಿಗೆ ‘Center for Excellence’ ಆಗಿ ಮಾರ್ಪಡಿಸಿ ವಿಶೇಷ ತರಬೇತಿ ನೀಡಲಾಗುವುದು.
ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ: 5,000 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಸಲು ತಲಾ 50,000 ರೂ. ಸಹಾಯಧನ.
ಸಾಂಸ್ಕೃತಿಕ ಏಕತೆ: ಅಂಬೇಡ್ಕರ್ ಅವರ ಕೃತಿಗಳನ್ನು ಉರ್ದು ಭಾಷೆಗೆ ಅನುವಾದಿಸುವ ಮೂಲಕ ಸಾಮಾಜಿಕ ಅರಿವು ಮೂಡಿಸುವ ಪ್ರಯತ್ನ.
- Free Laptop for Students
- K-CET JEE NEET Training
- Karnataka Budget 2025
- Maulana Azad Model Schools
- Minority Hostel Development
- Minority Welfare Schemes
- Shishunala Sharifa Residential Schools
- ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳು
- ಕರ್ನಾಟಕ ಬಜೆಟ್ 2025
- ಮೌಲಾನಾ ಆಜಾದ್ ಮಾದರಿ ಶಾಲೆಗಳು
- ವಕ್ಸ್ ಆಸ್ತಿ ಅಭಿವೃದ್ಧಿ.
- ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಯೋಜನೆ
- ಶಿಶುನಾಳ ಶರೀಫ ವಸತಿ ಶಾಲೆ
- ಹಜ್ ಭವನ





Leave a comment