Site icon Kannada News-suddikshana

ಎಂಐಟಿ ಮತ್ತು ಜಿಎಂಯು ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆ

SUDDIKSHANA KANNADA NEWS/ DAVANAGERE/ DATE-25-06-2025

ದಾವಣಗೆರೆ: ವಿವಿಧ ಪ್ರತಿಷ್ಠಿತ ಕಂಪನಿಗಳು ಇತ್ತೀಚೆಗೆ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಮತ್ತು ಜಿಎಂಯು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕಗ್ನಿಜೆಂಟ್ ಕಂಪನಿ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ಇಂಜಿನಿಯರಿಂಗ್ ವಿಭಾಗದ ಆರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಟಿಸಿಎಸ್ ಕಂಪನಿ ಸಂದರ್ಶನ ಪ್ರಕ್ರಿಯೆಯಲ್ಲಿ ಬಿಸಿಎ ವಿಭಾಗದ ಅಂತಿಮ ವರ್ಷದ ಏಳು ವಿದ್ಯಾರ್ಥಿಗಳು ಮತ್ತು ಬಿ ಎಸ್ ಸಿ ಅಂತಿಮ ವರ್ಷದ ಒಬ್ಬ ವಿದ್ಯಾರ್ಥಿಯು ಆಯ್ಕೆಯಾಗಿದ್ದಾರೆ ಹಾಗೆಯೇ ಟಿಸಿಎಸ್ ಕಂಪನಿಯು ಎಂಬಿಎ ವಿದ್ಯಾರ್ಥಿಗಳಿಗೆ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ಮೂರು ಎಂಬಿಎ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಆಪ್ಟಂ ಕಂಪನಿಯು ಬಯೋ ಟೆಕ್ನಾಲಜಿ ವಿಭಾಗದ ವಿದ್ಯಾರ್ಥಿಗಳಿಗೆ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ಒಟ್ಟು 20 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಇನ್ನೂ 10 ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಕೇನ್ಸ್ ಕಂಪನಿಯು ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ
ನಾಲ್ಕು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಇದುವರೆಗೂ 1071 ಜಾಬ್ ಆಫರ್ಸ್ ಸ್ವೀಕರಿಸಿದ್ದು, ಇನ್ನೂ ಕೆಲವು ಪ್ರತಿಷ್ಠಿತ ಕಂಪನಿಗಳ ಫಲಿತಾಂಶ ನಿರೀಕ್ಷೆಯಲ್ಲಿದ್ದೇವೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಆಡಳಿತ ಅಧಿಕಾರಿ, ಜಿಎಂ ವಿಶ್ವವಿದ್ಯಾಲಯದ ಕುಲಾಧಿಪತಿಗಳು, ಕುಲಪತಿಗಳು, ಸಹಕುಲಪತಿಗಳು, ಕುಲಸಚಿವರು, ಡೀನ್ಸ್, ನಿರ್ದೇಶಕರುಗಳು, ವಿಭಾಗದ ಮುಖ್ಯಸ್ಥರುಗಳು, ಪ್ರಾಧ್ಯಾಪಕ ವರ್ಗದವರು ಮತ್ತು ವಿದ್ಯಾರ್ಥಿಗಳು ಶುಭಕೋರಿದ್ದಾರೆ.

Exit mobile version