Site icon Kannada News-suddikshana

ದಶಕಗಳ ಹೋರಾಟಕ್ಕೆ ಸಿಕ್ಕ ಜಯ: ಒಳಮೀಸಲಾತಿ ಜಾರಿಗೊಳಿಸಿದ ಸಿದ್ದರಾಮಯ್ಯ ನಿರ್ಧಾರಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ

ಸಿದ್ದರಾಮಯ್ಯ

SUDDIKSHANA KANNADA NEWS/ DAVANAGERE/DATE:21_08_2025

ದಾವಣಗೆರೆ: ವಿಧಾನಸಭೆಯಲ್ಲಿ ಬುಧವಾರ ದಲಿತ ಸಮುದಾಯಕ್ಕೆ ಒಳಮೀಸಲಾತಿ ಘೋಷಿಸುವ ಮೂಲಕ ದಶಕಗಳ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಬೆಂಗಳೂರಿನಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

READ ALSO THIS STORY: ದಾವಣಗೆರೆಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಆರೋಪ: ಗೃಹಿಣಿ ಆತ್ಮಹತ್ಯೆಗೆ ಶರಣು!

ದಲಿತ ಸಮುದಾಯದ ಬಹುಕಾಲದ ಬೇಡಿಕೆಯಾದ ಒಳಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಸಹಿಸುದ್ದಿ ನೀಡಿದ್ದು, ಎಡಗೈ ಹಾಗೂ ಬಲಗೈ ಸಮುದಾಯಕ್ಕೆ ತಲಾ ಶೇ.೬ ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಎಂದು ಘೋಷಿಸಿದ್ದೀರಿ. ಇದರೊಂದಿಗೆ ದಲಿತರ ದಶಕಗಳ ಬೇಡಿಕೆ ಈಡೇರಿಸಿ ದಲಿತರಿಗೆ ದಾರಿ ದೀಪವಾಗಿದ್ದೀರಿ ಎಂದು ವಿಧಾನಸೌಧದಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

ನಿನ್ನೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಬಗ್ಗೆ ಮಹತ್ವದ ನಿರ್ಣಯ ಕೈಗೊಂಡು, ಎಡಗೈ ಸಮುದಾಯಕ್ಕೆ ಶೇ.೬ರಷ್ಟು, ಬಲ ಸಮುದಾಯಕ್ಕೆ ಶೇ.೬ರಷ್ಟು ಹಾಗೂ ಲಂವಾಣಿ, ಭೋವಿ, ಕೊರಚ ಇತರೆ ಸಮುದಾಯಗಳಿಗೆ ಶೇ.೫ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನ ಮಾಡಿ ಯಾವ ಸಮುದಾಯಗಳಿಗೆ ಅನ್ಯಾಯವಾಗದಂತೆ ಸಾಮಾಜಿಕ ನ್ಯಾಯ ಒದಗಿಸಿದ್ದೀರಿ ಎಂದು ಬಸವಂತಪ್ಪ ಹೇಳಿದ್ದಾರೆ.

ನ್ಯಾ.ನಾಗಮೋಹನ್ ದಾಸ್ ವರದಿಯ ಶಿಫಾರಸುಗಳನ್ನು ಕೆಲ ಮಾರ್ಪಾಡುಗಳೊಂದಿಗೆ ಒಳಮೀಸಲಾತಿ ಕಲ್ಪಿಸಿದ್ದಾರೆ. ಎ, ಬಿ, ಸಿ ಎಂದು ವರ್ಗೀಕರಣ ಮಾಡಿ ಮೀಸಲಾತಿ ಹಂಚಿದ್ದು, ಈ ಮೂಲಕ ದಶಕಗಳ ಹೋರಾಟಕ್ಕೆ ನೀವು ನ್ಯಾಯ
ಒದಗಿಸಿದ್ದೀರಿ ಎಂದು ಹರ್ಷ ವ್ಯಕ್ತಪಡಿಸಿದರು.

ಸುಪ್ರೀಂ ಕೋರ್ಟ್ ಆದೇಶ ನೀಡುವ ಮೂಲಕ ಪರಿಶಿಷ್ಟ ಜಾತಿಗಳ ಉಪ ವರ್ಗೀಕರಣ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ನೀಡಿತ್ತು. ಸಂವಿಧಾನದ ಸಮಾನತೆ ತತ್ವಕ್ಕೆ ಚ್ಯುತಿ ಬಾರದಂತೆ ಒಳಮೀಸಲಾತಿ ಕಲ್ಪಿಸುವ ಮೂಲಕ ದಲಿತರಿಗೆ ಸಾಮಾಜಿಕ ನ್ಯಾಯ ಒದಗಿಸಿದ್ದೀರಿ. ಅಲ್ಲದೇ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನ ಮಾಡಿದ್ದೀರಿ ಎಂದು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Exit mobile version