Home ನವದೆಹಲಿ ಚಪ್ಪಲಿ ಎಸೆತದಿಂದ ನೊಂದಿದ್ದ ಶಾಸಕ ಪ್ರದೀಪ್ ಈಶ್ವರ್ ಹೆದರಬೇಡ, ನಿನ್ನೊಂದಿಗೆ ನಾವಿದ್ದೇವೆ: ಸಿದ್ದರಾಮಯ್ಯ ಅಭಯ!
ನವದೆಹಲಿಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ಚಪ್ಪಲಿ ಎಸೆತದಿಂದ ನೊಂದಿದ್ದ ಶಾಸಕ ಪ್ರದೀಪ್ ಈಶ್ವರ್ ಹೆದರಬೇಡ, ನಿನ್ನೊಂದಿಗೆ ನಾವಿದ್ದೇವೆ: ಸಿದ್ದರಾಮಯ್ಯ ಅಭಯ!

Share
ಸಿದ್ದರಾಮಯ್ಯ
Share

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ನಡೆದ ಕೆಂಪೇಗೌಡ ಜಯಂತಿ ಆಚರಣೆಯ ಸಂದರ್ಭದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ಚಪ್ಪಲಿ ಎಸೆದು, ಅವರ ಕುಟುಂಬದವರನ್ನು ನಿಂದಿಸಿರುವ ಘಟನೆ ರಾಜಕೀಯ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಂಬಂಧ ನೊಂದ ಶಾಸಕ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ನಾಯಕರನ್ನು ಭೇಟಿ ಮಾಡಿ ಅಂದು ನಡೆದ ಸಂಪೂರ್ಣ ಘಟನೆಯನ್ನು ವಿವರಿಸಿ, ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಹಿರಿಯ ನಾಯಕರು, “ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ. ಧೃತಿಗೆಡದೆ ಇಲ್ಲೇ ಇದ್ದು ಇವುಗಳನ್ನು ಎದುರಿಸಬೇಕು. ನಿಮ್ಮೊಂದಿಗೆ ನಾವಿದ್ದೇವೆ” ಎಂದು ಶಾಸಕರಿಗೆ ಸಂಪೂರ್ಣ ಬೆಂಬಲ ಹಾಗೂ ಧೈರ್ಯ ತುಂಬಿದ್ದಾರೆ.

ಗೃಹ ಸಚಿವರಿಗೆ ದೂರವಾಣಿ ಕರೆ, ಕಠಿಣ ಕ್ರಮಕ್ಕೆ ಆಗ್ರಹ:

ಪೊಲೀಸರ ಸಮ್ಮುಖದಲ್ಲೇ ಆಡಳಿತ ಪಕ್ಷದ ಶಾಸಕರೊಬ್ಬರಿಗೆ ಈ ರೀತಿಯಾಗಿರುವುದು ಅಕ್ಷಮ್ಯ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದ್ದು, ತಕ್ಷಣವೇ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ದೂರವಾಣಿ ಕರೆ ಮಾಡಿ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸೂಚಿಸಲಾಗಿದೆ. ಅಲ್ಲದೆ, ಸ್ಥಳದಲ್ಲಿದ್ದೂ ಭದ್ರತೆ ಒದಗಿಸುವಲ್ಲಿ ವಿಫಲರಾದ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವರಾದ ಮಧು ಬಂಗಾರಪ್ಪ ಅವರು ಉಪಸ್ಥಿತರಿದ್ದು ಶಾಸಕರಿಗೆ ಬೆಂಬಲ ಸೂಚಿಸಿದರು. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳ ಮೇಲಿನ ಇಂತಹ ದೌರ್ಜನ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles