ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಧಿಕಾರಿಗಳ ಬೆಂಡೆತ್ತಿದ ಶಾಸಕ ಬಸವಂತಪ್ಪ: ಕಳಪೆ ಗುಣಮಟ್ಟದ ಪಂಪ್ ಸೆಟ್ ಮೋಟಾರು, ಉಪಕರಣ ವಾಪಸ್ ಕಳುಹಿಸಿದ ಶಾಸಕರು

On: March 8, 2024 7:04 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:08-03-2024

ದಾವಣಗೆರೆ: ಕಳಪೆ ಗುಣಮಟ್ಟದ ಪಂಪ್ ಸೆಟ್ ಮೋಟಾರು, ಉಪಕರಣಗಳನ್ನು ರೈತರಿಗೆ ವಿತರಿಸುವುದನ್ನು ನಿಲ್ಲಿಸಿ ವಾಪಸ್ ಕಳುಹಿಸಿದ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಗುಣಮಟ್ಟದ ಪಂಪ್ ಸೆಟ್ ಮೋಟಾರು, ಉಪಕರಣಗಳನ್ನು ವಿವರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಿನ ಆನಗೋಡು ಗ್ರಾಮದ ಮರಳುಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಡಾ. ಬಿ. ಆರ್ .ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಆದಿ ಜಾಂಬವ ಅಭಿವೃದ್ಧಿ ನಿಗಮದಡಿ 2020-2022 ನೇ ಸಾಲಿನಲ್ಲಿ ಕೊರೆದಿದ್ದ ಬೋರ್ ವೆಲ್ ಗಳ 32 ಫಲಾನುಭವಿ ರೈತರಿಗೆ ಅಧಿಕಾರಿಗಳು ಪಂಪ್ ಸೆಟ್ ಮೋಟಾರು, ಪೈಪ್ ಗಳು ಮತ್ತು ಉಪಕರಣಗಳನ್ನು ವಿತರಿಸಿದರು.

ಆದರೆ ಕಳಪೆ ಗುಣಮಟ್ಟದ ಉಪಕರಣಗಳನ್ನು ವಿತರಿಸಿರುವುದನ್ನು ಗಮನಿಸಿದ ರೈತರು ಕೂಡಲೇ ಶಾಸಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ವಿತರಣ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ, ಪಂಪ್ ಸೆಟ್ ಮೋಟಾರು, ಪೈಪ್ ಗಳು, ಉಪಪಕರಣಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಬೆಂಗಳೂರಿನ ಯೂನಿಟೆಡ್ ಇಂಜಿನಿಯರ್ ಏಜೆನ್ಸಿಯಿಂದ ವಿತರಿಸಲು ತಂದಿದ್ದ ಐಎಸ್ ಐ ಮಾಕ್೯ ಇಲ್ಲದ ಪಂಪ್ ಸೆಟ್ ಮೋಟಾರು, ಪೈಪ್ ಗಳು, ಉಪಕರಣಗಳನ್ನು ಕಂಡ ಶಾಸಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪ್ರಮುಖಾಂಶಗಳು:

– 32 ಜನ ರೈತರಿಗೆ ವಿತರಿಸಲು ತಂದಿದ್ದ ಅಧಿಕಾರಿಗಳು
– ಕಳಪೆ ಉಪಕರಣ ವಿತರಿಸುವ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿದ ರೈತರು
– ಕಳಪೆ ಗುಣಮಟ್ಟದ ಉಪಕರಣ ಕಂಡು ಶಾಸಕರು ತರಾಟೆ

ಬೋರ್ ವೆಲ್ ಕೊರೆಯುವುದು, ಪಂಪ್ ಸೆಟ್ ಮೋಟಾರು, ಪೈಪ್, ಉಪಕರಣಗಳ ಒಟ್ಟು ಸೌಲಭ್ಯ ಕಲ್ಪಿಸಲು ಸರ್ಕಾರ ಒಬ್ಬ ರೈತ ಫಲಾನುಭವಿಗೆ 5 ಲಕ್ಷ ರೂ. ಕೊಡುತ್ತದೆ. ಆದರೆ ಇಲ್ಲಿ ಕಳಪೆ ಗುಣಮಟ್ಟದ ಪಂಪ್ ಸೆಟ್ ಮೋಟಾರು, ಪೈಪ್, ಉಪಕರಣ ವಿತರಿಸುತ್ತಿದ್ದಿರಿ. ಈ ಉಪಕರಣಗಳನ್ನು ಖರೀದಿಸಿದ ಸರಿಯಾದ ಬಿಲ್ ಇಲ್ಲ. ಐಎಸ್ ಐ ಮಾಕ್೯ ಇಲ್ಲ. ಒಬ್ಬ ರೈತನಿಗೆ ಐದು ಪೈಪ್, ಇನ್ನೊಬ್ಬ ರೈತನಿಗೆ ಮೂರು ಪೈಪ್ ಕೊಡುತ್ತಿದ್ದಿರಿ. ರೈತರಿಗೆ ಎಷ್ಟೆಷ್ಟು ಪೈಪ್ ಕೊಡಬೇಕೆಂಬ ಮಾಹಿತಿ ಇಲ್ಲ ಎಂದು ಶಾಸಕರು ಅಧಿಕಾರಿಗಳನ್ನು ಬೆಂಡೆತ್ತಿದರು.

ಕೂಡಲೇ ಈ ಪಂಪ್ ಸೆಟ್ ಮೋಟಾರು, ಪೈಪ್ ಮತ್ತು ಉಪಕರಣಗಳನ್ನು ವಾಪಸ್ ತೆಗೆದುಕೊಂಡು ಹೋಗಿ ಗುಣಮಟ್ಟದ ಪಂಪ್ ಸೆಟ್ ಮೋಟಾರು, ಪೈಪ್, ಉಪಕರಣಗಳನ್ನು ವಿತರಿಸಬೇಕು. ಒಂದು ವೇಳೆ ಕಳಪೆ ಗುಣಮಟ್ಟದ ಉಪಕರಣಗಳನ್ನು ವಿತರಿಸಿದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೈತರು ಗುಣಮಟ್ಟದ ಉಪಕರಣಗಳನ್ನು ವಿತರಿಸಿದರೆ ಮಾತ್ರ ಪಡೆಯಬೇಕು. ಇಲ್ಲದಿದ್ದರೆ, ನನ್ನ ಗಮನಕ್ಕೆ ತಂದರೆ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಿಸಲು ಮೇಲಧಿಕಾರಿಗಳಿಗೆ ಶಿಫಾರಸು ಮಾಡುತ್ತೇನೆ. ಅಲ್ಲದೇ ಅಂಬೇಡ್ಕರ್, ಆದಿ ಜಾಂಬವ, ವೀರಶೈವ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳಡಿ ಈ ಹಿಂದೆ ಇಂತಹ ಕಳಪೆ ಗುಣಮಟ್ಟದ ಉಪಕರಣಗಳನ್ನು ವಿತರಿಸಿರುವ ಬಗ್ಗೆ ನನ್ನ ಗಮನಕ್ಕೆ ತಂದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ರೈತರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಡಿಎಂ ಬಸವರಾಜಪ್ಒ, ಫೀಲ್ಡ್ ಆಫೀಸರ್ ಮರಿಸ್ವಾಮಿ, ಕರಿಬಸಪ್ಪ, ಬಸವರಾಜ್, ನಸರುಲ್ಲಾ, ಗ್ರಾಪಂ ಸದಸ್ಯರಾದ ದೇವಣ್ಣ, ಬಸಣ್ಣ, 32 ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

 

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment