SUDDIKSHANA KANNADA NEWS/ DAVANAGERE/ DATE:17-10-2024
ದಾವಣಗೆರೆ: ಭ್ರಷ್ಟಾಚಾರದ ಆರೋಪ ಕೇಳಿ ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಚನ್ನಗಿರಿ ಶಾಸಕ ಬಸವರಾಜ್ ವಿ. ಶಿವಗಂಗಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಚನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಗ್ರಾಮದ ನಾಡಕಚೇರಿಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಸರ್ಕಾರಿ ಕೆಲಸ ಎಂದರೆ ದೇವರ ಕೆಲಸವಿದ್ದಂತೆ, ಪ್ರಾಮಾಣಿಕವಾಗಿ ನಿಷ್ಠೆಯಿಂದ ಸಾರ್ವಜನಿಕರ ಕೆಲಸ ಮಾಡಿಕೊಡಿ ಎಂದು ಸೂಚಿಸಿದರು.
ಸಾರ್ವಜನಿಕರು ಸರ್ಕಾರಿ ಕಚೇರಿಗೆ ಬಂದರೆ ಅವರೊಂದಿಗೆ ತಾಳ್ಮೆಯಿಂದ ವರ್ತಿಸಬೇಕು. ಕಚೇರಿಗೆ ಪದದೇ ಪದೇ ಜನರನ್ನು ಅಲೆದಾಡಿಸಬಾರದು ಎಂದು ಬಸವರಾಜ್ ವಿ. ಶಿವಗಂಗಾ ಹೇಳಿದರು.
ಇದೇ ವೇಳೆ ನಾಡಕಚೇರಿಗೆ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆಗಳನ್ನ ಆಲಿಸಿ ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು. ಇನ್ನೂ ಕಚೇರಿಯಲ್ಲಿನ ಕಂಪ್ಯೂಟರ್ ಗಳನ್ನು ಸ್ವತಃ ಅವರೇ ಪರಿಶೀಲನೆ ಮಾಡಿ ದಾಖಲೆಗಳ ಮಾಹಿತಿ
ಪಡೆದುಕೊಂಡರು. ಕ್ಷೇತ್ರದ ಜನರ ತಮ್ಮ ಸಮಸ್ಯೆಗಳಿಗೆ ನೀಡಿದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು, ವಿನಃ ಕಾರಣ ಅರ್ಜಿಗಳನ್ನು ಇಟ್ಟುಕೊಳ್ಳಬಾರದೆಂದು ಕಚೇರಿ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದರು.
ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಬೇಕು, ಸಾರ್ವಜನಿಕರು ಈ ಬಗ್ಗೆ ದೂರು ನೀಡಿದರೆ ಕ್ರಮ ಜರುಗಿಸುತ್ತೇವೆ ಎಂದರು. ಈ ವೇಳೆ ನಾಡಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮದ
ಮುಖಂಡರು ಉಪಸ್ಥಿತರಿದ್ದರು.