ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸರ್… ಪ್ಲೀಸ್ ಅಭಿವೃದ್ದಿಗೆ ಅನುದಾನ ನೀಡಿ: ಪ್ರಿಯಾಂಕ್ ಖರ್ಗೆಗೆ ಶಾಸಕ ಶಿವಗಂಗಾ ಬಸವರಾಜ್ ಮನವಿ

On: January 18, 2025 7:56 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-01-2025

ಬೆಂಗಳೂರು: ಶಾಸಕರಿಗೆ ಅನುದಾನ ನೀಡುತ್ತಿಲ್ಲ ಎಂಬ ಅಸಮಾಧಾನದ ನಡುವೆ ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿನ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಪ್ರಿಯಾಂಕ್ ಖರ್ಗೆ ಅವರಲ್ಲಿ ಶಿವಗಂಗಾ ಬಸವರಾಜ್ ಕೇಳಿಕೊಂಡರು.

ಬೆಂಗಳೂರಿನ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯ ವೈಖರಿಗಳು, ಕೈಗೊಳ್ಳಬೇಕಾದ ಅವಶ್ಯಕ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಿದರು.

ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಅನುದಾನ ಬಿಡುಗಡೆಗೆ ಮಾಡುವಂತೆ ಒತ್ತಾಯಿಸಿದರು. ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯ ಮತ್ತು ಅಗತ್ಯ ಕ್ರಮ ಕೈಗೊಳ್ಳಲು ಹೆಚ್ಚಿನ ಅನುದಾನ ನೀಡಬೇಕು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಸಚಿವರಲ್ಲಿ ಮನವರಿಕೆ ಮಾಡಿದರು. ಸಚಿವರು ತಮ್ಮ ಕ್ಷೇತ್ರದ ಅಭಿವೃದ್ದಿಗೆ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದು, ವಿಶೇಷ ಕಾಳಜಿಯಿಂದ ಚರ್ಚಿಸಿ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸದ್ದಾರೆ ಎಂದು ಶಿವಗಂಗಾ ಬಸವರಾಜ್ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment