ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್: ಸರ್ಕಾರದ ಮಹತ್ವ ಆದೇಶ

On: July 3, 2024 2:46 PM
Follow Us:
---Advertisement---

ಬೆಂಗಳೂರು : ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಶಾಲಾ ಅವಧಿಯಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.

ದಿನೇ ದಿನೇ ಮೊಬೈಲ್ ಉಪಯೋಗವು ಶಾಲಾ ಕಾಲೇಜುಗಳಲ್ಲಿ ಹೆಚ್ಚಾಗುತ್ತಿದ್ದು, ಶಾಲಾ ಕಾಲೇಜುಗಳಲ್ಲಿನ ಶೈಕ್ಷಣಿಕ ವಾತಾವರಣವನ್ನು ಸಹ ಹದಗೆಡಿಸುತ್ತಿದೆ, ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆ.

ವಿದ್ಯಾರ್ಥಿಗಳು ತರಗತಿಯಲ್ಲಿ ಮೊಬೈಲ್ ನಲ್ಲಿ ಹಾಡು ಕೇಳುವುದು, ಆಟವಾಡುವುದು ಹಾಗೂ ಚಾಟಿಂಗ್ ಮಾಡುತ್ತಿದ್ದು, ಇದರಿಂದಾಗಿ ಅಹಿತಕರ ವಾತಾವರಣ ಉಂಟಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತದೆ. ಹಾಗೆಯೇ ಅನೇಕ ಪೋಷಕರು ಸಹ ಈ ಕುರಿತು ಆತಂಕ ವ್ಯಕ್ತಪಡಿಸಿರುತ್ತಾರೆ.

ಈ ಎಲ್ಲಾ ಅಂಶಗಳು ಸಭೆಯಲ್ಲಿ ಚರ್ಚೆಯಾಗಿದ್ದು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮೊಬೈಲ್ ಉಪಯೋಗವನ್ನು ನಿಷೇದಿಸಬೇಕೆಂಬ ಒಟ್ಟಾರೆ ಅಭಿಪ್ರಾಯ ಈ ಸಭೆಯಲ್ಲಿ ವ್ಯಕ್ತವಾಗಿರುತ್ತದೆ. ಆದ್ದರಿಂದ ಸರ್ಕಾರ ಈ ಕೆಳಕಂಡಂತೆ ಆದೇಶಿಸಿದೆ.

ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ (1 ರಿಂದ 10ನೇ ತರಗತಿ ಹಾಗೂ ಪ್ರಥಮ & ದ್ವಿತೀಯ ಪಿಯುಸಿ) ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರತಿಯೊಂದು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ, ಮೊಬೈಲ್‌ನ್ನು ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಉಪಯೋಗಿಸುವುದನ್ನು ನಿಷೇದಿಸಲಾಗಿದೆ. ಇದರೊಂದಿಗೆ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ಯಾವುದೇ ಸಿಬ್ಬಂದಿ ವರ್ಗದವರು ಕೂಡಾ ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ. ನಿಷೇಧವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು, ಶಿಕ್ಷಕರು-ಉಪನ್ಯಾಸಕರು ಹಾಗೂ ಸಿಬ್ಬಂದಿಯವರು ಶಾಲಾವಧಿಯಲ್ಲಿ, ಶಾಲಾ ಆವರಣದಲ್ಲಿ ಮೊಬೈಲ್ ಬಳಸಿದಲ್ಲಿ ಅಂತಹ ಮೊಬೈಲ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳತಕ್ಕದ್ದು. ಈ ನಿಷೇದವನ್ನು ಅನುಷ್ಠಾನಗೊಳಿಸಲು ಅನುಷ್ಠಾನ ಸಮಿತಿಯನ್ನು ರಚಿಸಿ, ಅವುಗಳ ಅಧಿಕಾರ ವ್ಯಾಪ್ತಿ ನಿಗಧಿಪಡಿಸಿದೆ.

 

Join WhatsApp

Join Now

Join Telegram

Join Now

Leave a Comment