Site icon Kannada News-suddikshana

ಆಧುನಿಕ ಹೈನುಗಾರಿಕೆ ಮತ್ತು ಕೋಳಿ ಸಾಕಾಣಿಕೆ ತರಬೇತಿ

SUDDIKSHANA KANNADA NEWS/ DAVANAGERE/ DATE-29-04-2025

ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಮೇ .2 ಮತ್ತು 3 ರಂದು ಆಧುನಿಕ ಹೈನುಗಾರಿಕೆ ತರಬೇತಿ ಹಾಗೂ ಮೇ.5 ಮತ್ತು 6 ರಂದು ಕೋಳಿ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹ ಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Exit mobile version