SUDDIKSHANA KANNADA NEWS/ DAVANAGERE/ DATE:05-03-2024
ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಮಾರ್ಚ್ 6 ಮತ್ತು 7 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೆÇೀರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿಗೆ ಯಾವುದೇ ಪ್ರೊತ್ಸಾಹ ಧನ, ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಲು ತಿಳಿಸಲಾಗಿದೆ.
ಕೆ.ಡಿ.ಪಿ ಸಭೆ:
ಪ್ರಸಕ್ತ ಸಾಲಿನ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ
ಮಾ.6 ರಂದು ಸಂಜೆ 4 ಗಂಟೆಗೆ ಜಿ.ಪಂ. ಎಸ್.ಎಸ್.ಮಲ್ಲಿಕಾರ್ಜುನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್ ತಿಳಿಸಿದ್ದಾರೆ.