SUDDIKSHANA KANNADA NEWS/ DAVANAGERE/ DATE:14-12-2024
ನವದೆಹಲಿ: ತುರ್ತು ಪರಿಸ್ಥಿತಿ ಕಳಂಕ ತಪ್ಪಿಸಲು ಕಾಂಗ್ರೆಸ್ ನಿಂದ ಎಂದಿಗೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.
ಸಂಸತ್ ನಲ್ಲಿ ಮಾತನಾಡಿದ ಅವರು, ಈ ದೇಶ ಕೆಟ್ಟ ಪರಿಸ್ಥಿತಿ ಎದುರಿಸಿದ್ದು ತುರ್ತು ಪರಿಸ್ಥಿತಿ. ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡಿದ್ದು ಕಾಂಗ್ರೆಸ್ ಎಂದು ಟೀಕಾಪ್ರಹಾರ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಪರಿಸ್ಥಿತಿಯನ್ನು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು, ಪಕ್ಷವು ದೇಶವನ್ನು “ಜೈಲುಗೃಹ” ವನ್ನಾಗಿ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಕತ್ತು ಹಿಸುಕಿದೆ ಎಂದು ಕಿಡಿಕಾರಿದರು.