SUDDIKSHANA KANNADA NEWS/ DAVANAGERE/ DATE:31-03-2025
ಮುಂಬೈ: ಸೆಪ್ಟಂಬರ್ ನಲ್ಲಿ ನಿವೃತ್ತಿ ಘೋಷಣೆಗೆ ನಾಗ್ಪುರದ ಆರ್ ಎಸ್ ಎಸ್ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಉತ್ತರಾಧಿಕಾರಿಯನ್ನು ಆರ್ಎಸ್ಎಸ್ ನಿರ್ಧರಿಸುತ್ತದೆ ಎಂದು ಸಂಜಯ್ ರಾವತ್ ಹೇಳಿಕೊಂಡಿದ್ದಾರೆ, ಇದು ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ನಾಗ್ಪುರ ಭೇಟಿಯನ್ನು ನಾಯಕತ್ವ ಪರಿವರ್ತನೆಗೆ ಸಂಬಂಧಿಸಿದ್ದಾಗಿದೆ ಎಂದು ಹೇಳಿರುವುದು ಕುತೂಹಲ ಮೂಡಿಸಿದ್ದಾರೆ.
‘ಟಾಟಾ, ಬೈ-ಬೈ’ ಹೇಳಲು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿಯಾಗಿದ್ದಾಗಿ ಹೇಳುತ್ತಾರೆ. ಆರ್ಎಸ್ಎಸ್ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರಿಗೆ ಪ್ರಧಾನಿ ಗೌರವ ಸಲ್ಲಿಸಿದ್ದಾರೆ. ಮೋದಿ ಸೆಪ್ಟೆಂಬರ್ನಲ್ಲಿ ನಿವೃತ್ತರಾಗಲು ಯೋಜನೆ ರೂಪಿಸುತ್ತಿದ್ದಾರೆ. ಇತ್ತೀಚೆಗೆ ನಾಗ್ಪುರದಲ್ಲಿರುವ ಆರ್ಎಸ್ಎಸ್ ಪ್ರಧಾನ ಕಚೇರಿಗೆ ಅವರು ನೀಡಿದ ಭೇಟಿಯೂ ಅದಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.
ಮೋದಿ ಕಳೆದ 10-11 ವರ್ಷಗಳಲ್ಲಿ ಆರ್ಎಸ್ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿಲ್ಲ. ಆದರೆ ಈಗ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ “ಟಾಟಾ, ಬೈ, ಬೈ” ಹೇಳಲು ಹಾಗೆ ಮಾಡಿದ್ದಾರೆ ಎಂದು ರಾವತ್ ಹೇಳಿದ್ದಾರೆ.
ಸೆಪ್ಟೆಂಬರ್ನಲ್ಲಿ ಮೇ ನಿವೃತ್ತಿ ಕಾ ಅರ್ಜಿ ಲಿಖ್ನೆ ಕೆ ಲಿಯೇ ಶಾಯದ್ ವೋ ಆರ್ಎಸ್ಎಸ್ ಮುಖ್ಯಾಲಯ ಗಯೇ [ಅವರು ಬಹುಶಃ ತಮ್ಮ ನಿವೃತ್ತಿ ಅರ್ಜಿಯನ್ನು ಸಲ್ಲಿಸಲು ಆರ್ಎಸ್ಎಸ್ ಪ್ರಧಾನ ಕಚೇರಿಗೆ ಹೋಗಿರಬಹುದು]” ಎಂದು ರೌವತ್ ಹೇಳಿದ್ದಾರಲ್ಲದೇ, ಆರ್ಎಸ್ಎಸ್ ದೇಶದ ನಾಯಕತ್ವದಲ್ಲಿ ಬದಲಾವಣೆಯನ್ನು ಬಯಸುತ್ತದೆ ಎಂದಿದ್ದಾರೆ.
“ನಾನು ಅರ್ಥಮಾಡಿಕೊಂಡಂತೆ ಇಡೀ ಸಂಘ ಪರಿವಾರವು ದೇಶದ ನಾಯಕತ್ವದಲ್ಲಿ ಬದಲಾವಣೆಯನ್ನು ಬಯಸುತ್ತದೆ. ಪ್ರಧಾನಿ ಮೋದಿಯವರ ಸಮಯ ಮುಗಿದಿದೆ. ಆರ್ ಎಸ್ ಎಸ್ ನವರು ಬದಲಾವಣೆ ಬಯಸುತ್ತಾರೆ. ಅವರು ಮುಂದಿನ ಬಿಜೆಪಿ ಮುಖ್ಯಸ್ಥರನ್ನು ಆಯ್ಕೆ ಮಾಡಲು ಬಯಸುತ್ತಾರೆ” ಎಂದು ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾವತ್ ಹೇಳಿದರು.
ಪ್ರಧಾನಿಯೊಬ್ಬರು ಅಧಿಕೃತವಾಗಿ ಸಂಘಟನೆಯ ಕೇಂದ್ರ ಕಚೇರಿಗೆ ಭೇಟಿ ನೀಡುತ್ತಿರುವುದು ಇದು ಎರಡನೇ ಬಾರಿ. 2000ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿ ಮೂರನೇ ಅವಧಿಯಲ್ಲಿ ಇಲ್ಲಿಗೆ ಭೇಟಿ ನೀಡಿದ್ದರು.