(loan:) ಮಹಿಳೆಯರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿ ಸಹಾಯಧನ, ಸಾಲ ಸೌಲಭ್ಯ ಜೊತೆಗೆ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ವಿವಿಧ ಯೋಜನೆಯಡಿಯಲ್ಲಿ ಸಾಲ ಹಾಗೂ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ. ಈ ಕುರಿತು ಮಾಹಿತಿ ಇಲ್ಲಿದೆ.
ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಡಾ. ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನಾಂಗದವರಿಂದ ಅರ್ಜಿ ಆಹ್ವಾನಿಸಿದೆ.
ಯಾವ ಯೋಜನೆಗಳಿಗೆ ಅರ್ಜಿ ಆಹ್ವಾನ:
* ಗಂಗಾ ಕಲ್ಯಾಣ ಯೋಜನೆ
* ಮೈಕ್ರೋ ಕ್ರೆಡಿಟ್ ಯೋಜನೆ
* ಉದ್ಯಮ ಶೀಲತಾ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ)ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

(loan:) ಮೈಕ್ರೋ ಕ್ರೆಡಿಟ್ ಯೋಜನೆಯಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚ 2.50 ಲಕ್ಷ ರೂ., ಸಹಾಯಧನ 1.50 ಲಕ್ಷ ರೂ., ಸಾಲ 1 ಲಕ್ಷ ರೂ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಸ್ವ-ಸಹಾಯ ಸಂಘ ನೋಂದಣಿಯಾಗಿರುವುದರ ಪ್ರಮಾಣ ಪತ್ರ ಮತ್ತು ಪೂರಕ ದಾಖಲೆಗಳು
* ಆಧಾರ್ ಕಾರ್ಡ
* ಸಂಘದ ಬ್ಯಾಂಕ್ ಪಾಸ್ ಬುಕ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
ಅಕ್ಟೋಬರ್ 10, 2024
ಅರ್ಜಿ ಸಲ್ಲಿಕೆ ಹೇಗೆ?;
ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.