Site icon Kannada News-suddikshana

“ಭಾರತೀಯ ಯೋಧರಿಗೆ ಸ್ಥೈರ್ಯ ತುಂಬಲು ತಿರಂಗಾ ಯಾತ್ರೆ”

SUDDIKSHANA KANNADA NEWS/ DAVANAGERE/ DATE-15-05-2025

ಶಿವಮೊಗ್ಗ: ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ಕರೆಯ ಮೇರೆಗೆ ದೇಶಾದ್ಯಂತ ತಿರಂಗಾ ಯಾತ್ರೆ ನಡೆಸಲು ಯೋಜಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆ. ಶಿಕಾರಿಪುರದಲ್ಲಿ ನಿವೃತ್ತ ಯೋಧರು, ವಕೀಲರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಕಾರ್ಯಕರ್ತರುಗಳ ನೇತೃತ್ವದಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು.

ಪೆಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಉಗ್ರ ರಕ್ಕಸರ ವಿರುದ್ಧದ ಬೃಹತ್ ಕಾರ್ಯಾಚರಣೆ ಆಪರೇಷನ್ ಸಿಂಧೂರದ ಮೂಲಕ ಉಗ್ರರನ್ನು ಸದೆಬಡಿದಿರುವ ವೀರ ಯೋಧರಿಗೆ ನೈತಿಕ ಸ್ಥೈರ್ಯ ಹಾಗೂ ಬೆಂಬಲ
ನೀಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಅಲ್ಲದೇ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ಯುದ್ಧ ಆರಂಭವಾಗುವ ಮುನ್ನವೇ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಉಗ್ರ ಪೋಷಕ
ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿರುವ ಹಿನ್ನೆಲೆಯಲ್ಲಿ ಮುಂದಿನ ಎಲ್ಲಾ ಕಾರ್ಯಾಚರಣೆಗೂ ಬೆಂಬಲ ನೀಡುವ ದೃಷ್ಟಿಯಿಂದ ರಾಜ್ಯಾದ್ಯಂತ ಬಿಜೆಪಿ ಕರ್ನಾಟಕ ತಿರಂಗಾ ಯಾತ್ರೆ ನಡೆಯಲಿದೆ ಎಂದು ಬಿ. ವೈ. ವಿಜಯೇಂದ್ರ
ತಿಳಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಹನುಮಂತಪ್ಪ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುರುಮೂರ್ತಿ, ಪುರಸಭಾ ಅಧ್ಯಕ್ಷೆ ಸುನಂದಾ ಮಂಜುನಾಥ್, ಉಪಾಧ್ಯಕ್ಷೆ ರೂಪಾ ಮಂಜುನಾಥ್
ಸೇರಿದಂತೆ ನಿವೃತ್ತ ಯೋಧರು, ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version