SUDDIKSHANA KANNADA NEWS/ DAVANAGERE/ DATE:30-01-2025
ದಾವಣಗೆರೆ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಅಮೃತಸ್ನಾನ ಮಾಡುವ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ ಸುಮಾರು 30 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ಅನೇಕರು ಗಾಯಗೊಂಡ ಘಟನೆ ದುಃಖಕರ ಸಂಗತಿಯಾಗಿದೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಘಟನೆಯಲ್ಲಿ ಮೃತರಾದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವೆ ಹಾಗೂ ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಕುಂಭಮೇಳದಲ್ಲಿ ಕನ್ನಡಿಗರ ರಕ್ಷಣೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು. ಬೆಳಗಾವಿಯ ನಾಲ್ವರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಹಾಗೂ ಗಾಯಗೊಂಡವರನ್ನು ಕರೆತರಲು ಏರ್ ಆ್ಯಂಬುಲೆನ್ಸ್ ವ್ಯವಸ್ಥೆಗೊಳಿಸಲಾಗಿದೆ ಎಂದಿದ್ದಾರೆ.