SUDDIKSHANA KANNADA NEWS/ DAVANAGERE/ DATE:22-09-2024
ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ತೋಟಗಾರಿಕೆ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಜನುಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಗರದ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಜನುಮದಿನ ಆಚರಣೆ ಹಾಗೂ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಮಾಯಕೊಂಡ ಶಾಸಕ ಬಸವಂತಪ್ಪ, ಜಗಳೂರು ಶಾಸಕ ದೇವೇಂದ್ರಪ್ಪ ಸೇರಿ ಕಾಂಗ್ರೆಸ್
ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಎಸ್. ಎಸ್. ಮಲ್ಲಿಕಾರ್ಜುನ್ ಅವರು, ಕುಟುಂಬ ಸದಸ್ಯರೊಂದಿಗೆ ಜನುಮದಿನವನ್ನು ತಮ್ಮ ನಿವಾಸದಲ್ಲಿ ಆಚರಿಸಿಕೊಂಡರು. ಈ ವೇಳೆ ತಂದೆ ಹಾಗೂ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು.
ಸಚಿವರಿಗೆ ಅವರ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಕೇಕ್ ತಿನ್ನಿಸುವ ಮೂಲಕ ಶುಭಹಾರೈಸಿದರು. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮಲ್ಲಿಕಾರ್ಜುನ್ ಅವರು ಕೇಕ್ ತಿನ್ನಿಸಿದರು. ಇಡೀ ಕುಟುಂಬದ ಸದಸ್ಯರು ಹಾಗೂ ಮಕ್ಕಳು ಸಚಿವರಿಗೆ ಶುಭಹಾರೈಸಿ ಸಂಭ್ರಮಪಟ್ಟರು.
ಡಾ. ಪ್ರಭಾ ಪೋಸ್ಟ್:
ನನ್ನ ಜೀವನ ಸಂಗಾತಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ‘ಜೀವನ ಸಂಗಾತಿ’ಯಾಗಿರುವುದು ನನ್ನ ಸೌಭಾಗ್ಯವಾಗಿದೆ. ಅಪಾರ ಮಹತ್ವಾಕಾಂಕ್ಷೆಯ ಗುಣಗಳನ್ನು ಹೊಂದಿರುವ ನೀವು, ನಿಮ್ಮ ಜವಾಬ್ದಾರಿಗಳಲ್ಲಿ ಪರಿಪೂರ್ಣ ವ್ಯಕ್ತಿಯಾಗಿದ್ದೀರಿ, ಜೀವನದ ಸತ್ವದ ಬಗ್ಗೆ ನಿಮ್ಮ ಉತ್ಸಾಹವು ಪ್ರಶಂಸನೀಯವಾಗಿದೆ.
ಒಬ್ಬ ಶ್ರೇಷ್ಠ ದಾರ್ಶನಿಕ, ಟಾಸ್ಕ್ ಮಾಸ್ಟರ್, ಮೌಲ್ಯಗಳೊಂದಿಗೆ ಸಮೂಹ ನಾಯಕರಾಗಿರುವ ನಿಮ್ಮನ್ನು, ನಿಮ್ಮ ಸಕ್ರಿಯ ರಾಜಕಾರಣದಲ್ಲಿ ಹೊಸ ಇನ್ನಿಂಗ್ಸ್ಗಾಗಿ ಎದುರು ನೋಡುತ್ತಿದ್ದೇನೆ. ನೀವು ನನ್ನ ಜೀವನ ಸಂಗಾತಿ, ತತ್ವಜ್ಞಾನಿ ಮತ್ತು ಮಾರ್ಗದರ್ಶಕ ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಪೋಸ್ಟ್ ಮಾಡಿದ್ದಾರೆ.