ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

RCB ವಿಜಯೋತ್ಸವ ವೇಳೆ ಕಾಲ್ತುಳಿತ ಆಕಸ್ಮಿಕವಲ್ಲ, ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ: ಎಂಪಿ ರೇಣುಕಾಚಾರ್ಯ ಕೆಂಡ!

On: June 5, 2025 4:33 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-05-06-2025

ದಾವಣಗೆರೆ: ಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತದಿಂದ 11 ಮಂದಿ ಅಮಾಯಕರ ಸಾವಿಗೆ ಕಾರಣವಾಗಿರುವ ಈ ಸರ್ಕಾರಕ್ಕೆ ನಾಚಿಕೆ, ಮರ್ಯಾದೆ, ನೈತಿಕತೆ ಇದ್ದರೆ, ಸಂಬಂಧ ಪಟ್ಟವರು ರಾಜೀನಾಮೆ ನೀಡಬೇಕು. ಪ್ರಕರಣದ ಕುರಿತು ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯರು ಬಹಳ ಜನ ಬಂದರು ಎಂದು ಹೇಳುತ್ತಾರೆ. ನೀವು ಸರಿಯಾಗಿ ಯೋಜನೆ ಮಾಡಿಲ್ಲ. ಪೊಲೀಸ್ ಆಫೀಸರ್, ಸರ್ಕಾರದ ಮಂತ್ರಿಗಳು, ಕೆಎಸಿಎ ಯಾವುದೇ ಸಭೆ ಮಾಡಿಲ್ಲ. ಡಿಪಿಎಆರ್ ದವರು ವಿಧಾನಸೌಧದ ಮುಂದೆ ಕಾರ್ಯಕ್ರಮ ಇದೆ ಎಂದು ಹೇಳಿದರು. ಯಾವುದೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿಲ್ಲ. ಮೊದಲು ರೋಡ್ ಶೋ ಇದೆ ಅಂತ ಹೇಳಿದ್ದರು. ಆಮೇಲೆ ರೋಡ್ ಶೋ ಇಲ್ಲ ಎಂದರು. ಗೊಂದಲದಿಂದಲೇ ಕಾಲ್ತುಳಿತ ಸಂಭವಿಸಿದೆ ಎಂದು ದೂರಿದರು.

ಸರ್ಕಾರದ ಬೇಜವಾಬ್ದಾರಿಯಿಂದಲೇ ಹನ್ನೊಂದು ಮಂದಿ ಸಾವನ್ನಪ್ಪಲು ಕಾರಣ. ಇದು ಸರ್ಕಾರ ನಡೆಸಿದ ಕೊಲೆ. ಸಾವಿಗೀಡಾದ ಆಮಾಯಕ ಜನರ ರಕ್ತ ಈ ಸರ್ಕಾರದ ಕೈಗೆ ಅಂಟಿದೆ. ಜನರ ಶಾಪವೂ ತಟ್ಟಿದೆ ಎಂದು ಆಕ್ರೋಶ
ವ್ಯಕ್ತಪಡಿಸಿದರು.

ಗಾಯಾಳುಗಳನ್ನು ಸಾರ್ವಜನಿಕರೇ ಎತ್ತಿಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಲು ಪ್ರಯತ್ನ ಮಾಡಿದ್ದಾರೆ. ಹಿರಿಯ ಪೊಲಿಸರು ನಿಷ್ಕ್ರಿಯವಾಗಿ ನಿಂತಿದ್ದರು. ಈ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಸಾವು
ವ್ಯರ್ಥವಾಗಬಾರದು. ಮತ್ತು ಇದು ನಮ್ಮ ಕರ್ನಾಟಕಕ್ಕೆ ಕಳಂಕವಾಗಿದೆ. ವಿಶ್ವಕಪ್ ಗೆದ್ದಾಗ ಮುಂಬೈನಲ್ಲಿ ಇಪ್ಪತ್ತೈದು ಕಿಲೋ ಮೀಟರ್ ವಿಜಯೋತ್ಸವ ಆಚರಿಸಿದ್ದರು. ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಹಿಂದಿನ ಘಟನೆಗಳಿಂದ
ಪಾಠ ಕಲಿಯಬೇಕು ಎಂದು ಹೇಳಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನದ ಸಂದರ್ಭದಲ್ಲಿ ಎರಡು ದಿನಗಳ ಕಾಲ ವ್ಯವಸ್ಥಿತವಾಗಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಿ ಬೆಳಗಿನ ನಾಲ್ಕು ಗಂಟೆಗೆ ಗೌರವಯುತವಾಗಿ ಅವರ ಅಂತ್ಯಸಂಸ್ಕಾರವನ್ನು ಅತ್ಯಂತ ಯಶಸ್ವಿಯಾಗಿ ಮಾಡಲಾಗಿತ್ತು. ಈ ಕಾರ್ಯಕಮದಲ್ಲಿ ಗೃಹ ಸಚಿವರ ಪಾತ್ರವೇ ಇಲ್ಲ. ಉಪ ಮುಖ್ಯಮಂತಿಗಳೇ ಏರ್ಪೋರ್ಟಿಗೆ ಹೋಗುತ್ತಾರೆ. ವಿಧಾನಸೌಧಕ್ಕೆ ಬರುತ್ತಾರೆ. ಅವರೇ ಮುಂದೆ ಬಂದು ಕಾರ್ಯಕ್ರಮ ಮಾಡುತ್ತಾರೆ. ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಮಂತ್ರಿಗಳು ಮತ್ತು ಅವರ ಛೇಲಾಗಳೇ ಇದ್ದರು ಎಂದು ಆರೋಪಿಸಿದರು.

ಜನರಿಗೆ ಆಟಗಾರರು ಕಾಣಿಸಲೇ ಇಲ್ಲ. ಇಷ್ಟು ಬೇಜವಾಬ್ದಾರಿ ಕಾರ್ಯಕ್ರಮ ನೋಡಿಲ್ಲ. ಈ ಸರ್ಕಾರಕ್ಕೆ ನಾಚಿಕೆ, ಮರ್ಯಾದೆ. ನೈತಿಕತೆ ಇದ್ದರೆ, ಸಂಬಂಧ ಪಟ್ಟವರು ರಾಜೀನಾಮೆ ನೀಡಬೇಕು. ಈ ಕಾರ್ಯಕ್ರಮ ಆಯೋಜನೆಯಲ್ಲಿ ಯಾವ ಹಿರಿಯ ಅಧಿಕಾರಿಗಳಿದ್ದಾರೆ. ಯಾವ ರಾಜಕಾರಣಿ ಇದ್ದಾರೆ. ಅವರೆಲ್ಲರ ಮೇಲೆ ಕ್ರಮ ಆಗಬೇಕು. ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದ್ದರೂ, ಸೂಕ್ತ ಜನಸಂದಣಿ ನಿರ್ವಹಣಾ ಯೋಜನೆ ಏಕೆ ರೂಪಿಸಲಿಲ್ಲ? ಸಾವಿರಾರು ಜನ ಸೇರಿದ್ದರೂ, ತುರ್ತು ಸೇವೆಗಳಾದ ಅಗ್ನಿಶಾಮಕ ದಳ, ಆಂಬ್ಯುಲೆನ್ಸ್, ವೈದ್ಯಕೀಯ ತಂಡ ಸಂಖ್ಯೆ ಅತ್ಯಂತ ಕಡಿಮೆಯಿತ್ತು ಏಕೆ? ಎಂದು ಪ್ರಶ್ನಿಸಿದರು.

ಗುಪ್ತಚರ ಇಲಾಖೆಯು ಲಕ್ಷಾಂತರ ಜನರು ಸೇರುವ ಸಾಧ್ಯತೆಯ ಬಗ್ಗೆ ಮುಂಚಿತವಾಗಿ ಎಚ್ಚರಿಕೆ ನೀಡಲಿಲ್ಲವೇ? ನೀಡಿದ್ದರೂ, ಆ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದು ಏಕೆ? ಕ್ರೀಡಾಂಗಣದ ಸಾಮಥ್ರ್ಯಕ್ಕೆ ಅಧಿಕ ಜನರು ಸೇರುವ ಸಾಧ್ಯತೆಯನ್ನು ಏಕೆ ಅಂದಾಜಿಸಲಾಗಲಿಲ್ಲ? ಇದು ಗಂಭೀರ ನಿರ್ಲಕ್ಷ್ಯವಲ್ಲವೇ? ಅಪಾರವಾದ ಕ್ರೀಡಾ ಪ್ರೇಮಿಗಳು ಸೇರುವ ನಿರೀಕ್ಷೆ ನಗರದ ಪ್ರತಿಯೊಬ್ಬರಿಗೂ ತಿಳಿದಿತ್ತು, ಆದರೆ ಸರ್ಕಾರ ನಡೆಸುವವರಿಗೆ ಮಾತ್ರ ಎಷ್ಟು ಜನ ಸೇರಬಹುದು ಎಂಬ ಅಂದಾಜು ಇರಲಿಲ್ಲ” ಎಂಬ ನಿಮ್ಮ ಮಾತು ಸರ್ಕಾರದ ವೈಫಲ್ಯವನ್ನು ಒಪ್ಪಿಕೊಂಡಂತಲ್ಲವೇ? ಕಾರ್ಯಕ್ರಮಕ್ಕೆ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಸರಿಯಾಗಿ ನಿರ್ವಹಿಸದಿರಲು ಕಾರಣವೇನು? ಎಂದು ಪ್ರಶ್ನೆಗಳ ಸುರಿಮಳೆಗೈದರು.

ಈ ಕಾರ್ಯಕ್ರಮವನ್ನು ಯಾರು ಆಯೋಜಿಸಿದ್ದರು ? ಸರ್ಕಾರವೇ, ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅಥವಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡಳಿತ ಮಂಡಳಿಯೇ? ಜವಾಬ್ದಾರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ಏಕೆ? ಆರ್ಸಿಬಿ ಪ್ರಶಸ್ತಿ ಗೆದ್ದ ಹನ್ನೆರಡು ಗಂಟೆಯೊಳಗೆ ವಿಧಾನಸೌಧದ ಮುಂದೆ ಸಮಾರಂಭ ಏರ್ಪಡಿಸುವ ಆತುರವೇನಿತ್ತು? ಡಿ.ಕೆ. ಶಿವಕುಮಾರ್ ಎಲ್ಲಾ ಶ್ರೇಯಸ್ಸು ತನಗೆ ಸಿಗಲಿ ಎಂದು ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ದಾರಾ? ಈ ಗೆಲುವಿನ “ಕ್ರೆಡಿಟ್” ತೆಗೆದುಕೊಳ್ಳುವ ಹಪಾಹಪಿ ಸರ್ಕಾರಕ್ಕೆ ಏಕೆ ಬಂತು? ಇದು ರಾಜಕೀಯ ಲಾಭಕ್ಕಾಗಿ ಮಾಡಿದ ಪ್ರಯತ್ನವೇ? ಎಂದು ಕೇಳಿದರು.

ಕ್ರೀಡಾಭಿಮಾನಿಗಳ ಸಾವಿಗೆ ಸರ್ಕಾರದ ಈ “ಕ್ರಿಮಿನಲ್ ನಿರ್ಲಕ್ಷ್ಯ” ಮತ್ತು “ಪ್ರಚಾರದ ಹಸಿವು” ಕಾರಣವಲ್ಲವೇ? ಸರ್ಕಾರ ಕೇವಲ ಭದ್ರತೆ ಒದಗಿಸಿದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ, ಇಂತಹ ಬೃಹತ್ ಕಾರ್ಯಕ್ರಮಕ್ಕೆ ಸೂಕ್ತ ಪರವಾನಗಿ ನೀಡುವುದು ಮತ್ತು ನಿಯಮಾವಳಿಗಳನ್ನು ವಿಧಿಸುವುದು ಸರ್ಕಾರದ ಕರ್ತವ್ಯವಲ್ಲವೇ? ಕಾಲ್ತುಳಿತ ಸಂಭವಿಸಿದಾಗಲೂ, ಸಂಭ್ರಮಾಚರಣೆಯನ್ನು ಏಕೆ ಮುಂದುವರಿಸಲು ಅವಕಾಶ ನೀಡಲಾಯಿತು? ಅದನ್ನು ತಕ್ಷಣ ನಿಲ್ಲಿಸಬಹುದಿತ್ತಲ್ಲವೇ? ಎಂದು ಹೇಳಿದರು.

ರಾಜ್ಯದ ಉಪಮುಖ್ಯಮಂತ್ರಿಗಳು, ಉಸ್ತುವಾರಿ ಸಚಿವರುಸೇರಿದಂತೆ ಇನ್ನು ಹಲವು ಸಚಿವರು ಮತ್ತು ಅಧಿಕಾರಿಗಳು ಕಾರ್ಯಕ್ರಮದ ಸ್ಥಳದಲ್ಲಿದ್ದರೂ, ಪರಿಸ್ಥಿತಿಯನ್ನು ನಿಯಂತ್ರಿಸಲು ಏಕೆ ವಿಫಲರಾದರು? ಅವರ ಹಾಜರಿ ಕೇವಲ ಪ್ರಚಾರಕ್ಕಾಗಿತ್ತೇ.? ಅವಘಡ ಸಂಭವಿಸಿದ ತರುವಾಯವೂ ಕ್ರೀಡಾಂಗಣದೊಳಗೆ ಸಂಭ್ರಮಾಚರಣೆಯನ್ನು ಕೂಡಲೇ ಸ್ಥಗಿತಗೊಳಿಸಬೇಕಿತ್ತು. ಆದರೆ ಸ್ವತಃ ಉಪಮುಖ್ಯಮಂತ್ರಿಗಳೇ ಸೂತಕದ ಮನೆಯಾಗಿದ್ದ ಸಮಯದಲ್ಲಿ ಮೈದಾನದೊಳಗಿನ ಸಂಭ್ರಮದಲ್ಲಿ ಭಾಗಿಯಾಗಿ ಮೃತಪಟ್ಟವರ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತೂ ದುಃಖವಾಗಲಿ ಅಥವಾ ನೋವಾಗಲಿ ಇಲ್ಲದಿರುವುದು ಸತ್ಯವಲ್ಲವೇ?. ಇದು ಸರ್ಕಾರದ, ಸರ್ಕಾರ ನಡೆಸುವವರ ಸಂವೇದನಾ ಶೂನ್ಯತೆಗೆ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೀವು “ಅದು ಕ್ರಿಕೆಟ್ ಅಸೋಸಿಯೇಷನ್ ಕಾರ್ಯಕ್ರಮ” ಎಂದು ಸರ್ಕಾರದ ತಪ್ಪನ್ನು ಮುಚ್ಚಿ, ತಮ್ಮ ಹೊಣೆಗಾರಿಕೆಯಿಂದ ನುಣಿಚಿಕೊಳ್ಳುವ ಕೀಳು ಮಟ್ಟದ ವರ್ತನೆ ತೋರಿದ್ದೀರಿ,. ಜನ ಸೇರುತ್ತಾರೆ ಎಂದು ಅರಿವಿದ್ದಾಗ ಅಲ್ಲಿ ಬರುವವರಿಗೆ ರಕ್ಷಣೆ ನೀಡಬೇಕಾದ್ದು ಸರ್ಕಾರದ ಕರ್ತವ್ಯ ಎಂಬುದನ್ನು ನೀವು ಮರೆತಿದ್ದೀರಾ? ಬೇಜವಾಬ್ದಾರಿ ಸರ್ಕಾರದ ವಿರುದ್ಧ ನಮ್ಮ ಆಕ್ರೋಶ ಪ್ರಕಟಿಸುವುದು ನಮ್ಮ ಕರ್ತವ್ಯ. ಸರ್ಕಾರ ತಪ್ಪೆಸಗಿ ಅದನ್ನು ಮುಚ್ಚಿಕೊಳ್ಳಲು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವುದು ಖಂಡನೀಯ ಎಂದು ರೇಣುಕಾಚಾರ್ಯ ಹೇಳಿದರು.

ಗೋಷ್ಠಿಯಲ್ಲಿ ಲೋಕಿಕೆರೆ ನಾಗರಾಜ್, ಅಜಯ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ಎನ್. ನಾಗಪ್ಪ, ಕೊಳೇನಹಳ್ಳಿ ಸತೀಶ್, ಧನಂಜಯ ಕಡ್ಲೇಬಾಳು, ಅರುಣ್ ಕುಮಾರ್ ಮತ್ತಿತರರು ಹಾಜರಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಅಂತರಾಷ್ಟ್ರ

ನ. 26ರಿಂದ ಐದು ದಿನಗಳ ಶಾಮನೂರು ಡೈಮಂಡ್, ಶಿವಗಂಗಾ ಕಪ್ 2025: ಅಂತರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಆಯೋಜನೆ

ಅಪಘಾತದಲ್ಲಿ ಮೃತಪಟ್ಟ ಶಿಕ್ಷಕನ ಕುಟುಂಬಕ್ಕೆ ಸಿಕ್ತು 1 ಕೋಟಿ ಪರಿಹಾರ! ಸಿಕ್ಕಿದ್ದು ಹೇಗೆ ಗೊತ್ತಾ?

ಭದ್ರತೆ

ಭದ್ರತೆ ಸವಾಲು ನಿಭಾಯಿಸದ, ದೇಶದ ಭದ್ರತಾ ವ್ಯವಸ್ಥೆ ವೈಫಲ್ಯ ಹೊಣೆ ಹೊತ್ತು ಅಮಿತ್ ಶಾ ರಾಜೀನಾಮೆ ನೀಡಲಿ: ಬಿ. ಕೆ. ಹರಿಪ್ರಸಾದ್ ಆಗ್ರಹ

ಧರ್ಮೇಂದ್ರ

ಧರ್ಮೇಂದ್ರ ಚಿಕಿತ್ಸೆಗೆ ಸ್ಪಂದಿಸುತ್ತಾ ಚೇತರಿಕೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಹೇಮಾ ಮಾಲಿನಿ, ಇಶಾ ಡಿಯೋಲ್ ಕೆಂಡಾಮಂಡಲ!

ಪ್ರಭಾ ಮಲ್ಲಿಕಾರ್ಜುನ್

ಅಡಿಕೆ ಕ್ಯಾನ್ಸರ್ ಕಾರಕವಲ್ಲ, ಹೆಚ್ಚಿನ ಸಂಶೋಧನೆಗೆ ಅನುದಾನ ಕೊಡುವಂತೆ ಕೇಂದ್ರ ಕೃಷಿ ಸಚಿವರಿಗೆ ಮನವಿ: ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ

ಕೆಂಪು ಕೋಟೆ ಪ್ರಬಲ ಸ್ಫೋಟ ಹಿನ್ನೆಲೆ: ದಾವಣಗೆರೆ ಜಿಲ್ಲೆಯಲ್ಲಿ ಹೇಗಿದೆ ಕಟ್ಟೆಚ್ಚರ?

Leave a Comment